ಸೆ.14: ಬೆಳ್ಳಿಹಬ್ಬದ ಸಂಭ್ರಮದಲ್ಲಿ ಗ್ಲೋರಿಯಾ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

0

ಪುತ್ತೂರು: ಬೆಳ್ಳಿಹಬ್ಬದ ಸಂಭ್ರಮವನ್ನು ಕಾಣುತ್ತಿರುವ ಗ್ಲೋರಿಯಾ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯು ಸೆ.14 ರಂದು ಪೂರ್ವಾಹ್ನ ಕಿಲ್ಲೆ ಮೈದಾನದ ಮಿನಿ ವಿಧಾನಸೌಧದ ಬಳಿಯ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕಟ್ಟಡದ ಮೇರಿ ದೇವಾಸಿಯಾ ಸಭಾಂಗಣದಲ್ಲಿ ಜರಗಲಿದೆ.


ಗ್ಲೋರಿಯಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಕೋರ್ಟ್ ರಸ್ತೆಯ ವಿಶ್ವ ಸಂಕೀರ್ಣದಲ್ಲಿ ವ್ಯವಹರಿಸುತ್ತಿದ್ದು ಬೆಳ್ಳಿಹಬ್ಬದ ಮಹಾಸಭೆಯು ಅಧ್ಯಕ್ಷ ರಾಕೇಶ್ ಜೆ.ಮಸ್ಕರೇನ್ಹಸ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ ಸೊಸೈಟಿ ಕಾರ್ಯದರ್ಶಿ ಮೇಬಲ್ ಗ್ರೇಸಿ ಮಾಡ್ತಾ, ಉಪಾಧ್ಯಕ್ಷ ಸುನಿಲ್ ಶೈಲೇಶ್ ಮಸ್ಕರೇನ್ಹಸ್, ನಿರ್ದೇಶಕರುಗಳಾದ ರೋಯಿಸ್ಟನ್ ಡಾಯಸ್, ಪವನ್ ಜೋನ್ ಮಸ್ಕರೇನ್ಹಸ್, ವಿಜಯ್ ವಿಲ್ಫ್ರೆಡ್ ಡಿ’ಸೋಜ, ಲೆಸ್ಟರ್ ಪಿಂಟೊ, ಸಿಲ್ವೆಸ್ಟರ್ ಗೊನ್ಸಾಲ್ವಿಸ್, ಮೌರಿಸ್ ಮಸ್ಕರೇನ್ಹಸ್, ಹಿಲ್ಡಾ ಮಿನೇಜಸ್, ಶೈನಿ ಎನ್.ಎಸ್ ರವರು ಭಾಗವಹಿಸಲಿದ್ದಾರೆ ಎಂದು ಗ್ಲೋರಿಯಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here