ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದಲಿತ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ಆರೋಪದಲ್ಲಿ ಉಪ್ಪಿನಂಗಡಿ ಮೂಲದ ಓರ್ವನನ್ನು ಮೂಡಬಿದ್ರೆಯಲ್ಲಿ ಬಂಧಿಸಲಾಗಿದೆ.
ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿ ಕೆಲಸ ಮಾಡಿಕೊಂಡು ಮೂಡಬಿದ್ರೆ ಕಲ್ಲಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಉಪ್ಪಿನಂಗಡಿ ಬೆದ್ರೋಡಿ ಮೂಲದ ಸಂಕೇತ್ ಗಾಣಿಗ(31ವ.)ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಸಂತ್ರಸ್ತೆ ನೀಡಿದ್ದ ದೂರಿನ ಮೇರೆಗೆ ಆರೋಪಿ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ವರದಿಯಾಗಿದೆ.