ಪುತ್ತೂರು: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ, ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯ ರೋಟರಿ ಸಮುದಾಯದ ದಳ ಕಡೇಶಿವಾಲಯ ಹಾಗೂ ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜು ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಸ.11ರಂದು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯ ಶಾಲಾ ವಠಾರದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು.

ರೋಟರಿ ಸಮುದಾಯದಳ ಇದರ ಸಲಹೆ ಸಮಿತಿಯ ಅಧ್ಯಕ್ಷರಾದ ಕೆ. ಶೆಟ್ಟಿ ಕುರುಂಬ್ಲಾಜೆ ಹಾಗೂ ರೋಟರಿ ಸಮುದಾಯದಳ ಇದರ ರತ್ನಾಕರ ನಾಯ್ಕ್, ಕಾರ್ಯದರ್ಶಿ ಕಿಶೋರ್ ಕುಮಾರ್. ಬಿ ಹಾಗೂ ದ. ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಪೆರ್ಲಪು ಇದರ ಮುಖ್ಯೋಪಾಧ್ಯಯರಾದ ಬಾಬು ಪೂಜಾರಿ ಹಾಗೂ ಸರಕಾರಿ ಪ್ರೌಢಶಾಲೆ ಇದರ ಮುಖ್ಯೋಪಾಧ್ಯಯರಾದ ಲೋಕಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ರೋಟರಿ ಸಮುದಾಯದ ಸಲಹೆ ಸಮಿತಿಯ ಅಧ್ಯಕ್ಷರು ಶಿಬಿರಕ್ಕೆ ಶುಭ ಹಾರೈಸಿದರು. ಸಂಸ್ಥೆಯ ಸದಸ್ಯರು ಶಿಬಿರದಲ್ಲಿ ಪಾಲ್ಗೊಂಡರು.