ದಿ. ಶ್ಯಾಮಲಾದೇವಿ ಸ್ಮರಣಾರ್ಥ ವಿದ್ಯಾರ್ಥಿ ವೇತನ ವಿತರಣೆ
ಮಂಗಳೂರು: ಮಂಗಳೂರು ಲಾಲ್ ಬಾಗ್ ನ ತಕ್ಷಶಿಲಾ ಕಟ್ಟಡದಲ್ಲಿ ಪ್ರಧಾನ ಕಚೇರಿ ಹೊಂದಿರುವ ಮಹಾವೀರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮಹಾಸಭೆ ಸೆ.14ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಸೊಸೈಟಿಯ ಅಧ್ಯಕ್ಷರೂ ಹೈಕೋರ್ಟ್ ಹಿರಿಯ ನ್ಯಾಯವಾದಿಗಳೂ ಆಗಿರುವ ಪಿಪಿ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ಲಾಲ್ ಬಾಗ್ ತಕ್ಷಶಿಲಾ ಕಟ್ಟಡದಲ್ಲಿ ನಡೆಯಲಿರುವ ಮಹಾಸಭೆಯಲ್ಲಿ ದಿ. ಶ್ಯಾಮಲಾದೇವಿ ಅವರ ಸ್ಮರಣಾರ್ಥ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವಿತರಣೆ ಮತ್ತು ಸೊಸೈಟಿಯ ಬೆಳ್ಳಿಹಬ್ಬದ ಸಂಭ್ರಮಾಚರಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.