ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು  ಈಜು ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದ. ಕ ಜಿಲ್ಲೆ ಮಂಗಳೂರು  ಇದರ  ಆಶ್ರಯದಲ್ಲಿ ಸೆ 10 ರಂದು ಮಂಗಳೂರಿನ ಸಂತ ಅಲೋಶಿಯಸ್ ಪ. ಪೂ ಕಾಲೇಜಿನಲ್ಲಿ ನಡೆದ ‘ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಈಜು ಸ್ಪರ್ಧೆ 2025 – 26’ ರಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಐದು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂದಿರುತ್ತಾರೆ.


ದ್ವಿತೀಯ ವಿಜ್ಞಾನ ವಿಭಾಗದ ಪ್ರಾಧಿ ಕ್ಲಾರೆ ಪಿಂಟೋ 3 ಚಿನ್ನ, ದಿಗಂತ್ ವಿ ಎಸ್ 2ಚಿನ್ನ ಮತ್ತು 2 ಬೆಳ್ಳಿ, ಅನ್ವಿತ್ ರೈ 2 ಚಿನ್ನ  ಮತ್ತು 2 ಬೆಳ್ಳಿ, ಆರ್ ಅಮನ್ ರಾಜ್ 3 ಬೆಳ್ಳಿ ಮತ್ತು 1 ಕಂಚು  ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ತನು ಶ್ರೀ ಎಸ್ ಗೌಡ 2 ಬೆಳ್ಳಿ ಮತ್ತು 1 ಕಂಚು ಪದಕವನ್ನು ಪಡೆದುಕೊಂಡು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.


ದ್ವಿತೀಯ ವಿಜ್ಞಾನ ವಿಭಾಗದ ಅಧೀನ್ ರೈ ಬಿ 1 ಬೆಳ್ಳಿ ಪದಕವನ್ನು ಪಡೆದುಕೊಂಡಿರುತ್ತಾರೆ. ಇವರುಗಳಿಗೆ ಈಜು ತರಬೇತುದಾರರಾದ ಪಾರ್ಥ ವಾರಣಾಸಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here