ಪುತ್ತೂರು: ಸೆ.7 ರಂದು ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ಇಲ್ಲಿ ನಡೆದ ತಾಲೂಕು ಮಟ್ಟದ 14/17 ರ ವಯೋಮಾನದ ಬಾಲಕ ಬಾಲಕಿಯರ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ಇಲ್ಲಿಯ 14ರ ವಯೋಮಾನದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಹಾಗೆಯೇ 17 ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡು ತಂಡದಿಂದ ಆರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಸಂಚಾಲಕರಾದ ಹೇಮನಾಥ ಶೆಟ್ಟಿ ಕಾವು ಹಾಗೂ ಪ್ರಭಾರ ಮುಖ್ಯೋಪಾಧ್ಯಾಯಿನಿಯಾದ ಗಾಯತ್ರಿ ಎಸ್ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.