ಪುತ್ತೂರು: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಸೆಕ್ರೆಡ್ ಹಾರ್ಟ್ ಶಾಲೆ ಮಡಂತ್ಯಾರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2025–26ನೇ ಸಾಲಿನ ಜಿಲ್ಲಾ ಮಟ್ಟದ 17 ವರ್ಷ ವಯೋಮಾನದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ದರ್ಬೆ ಪಾಂಗ್ಲಾಯಿಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಸಾಧಿಸಿದೆ.

ಈ ಪಂದ್ಯಾವಳಿಯಲ್ಲಿ ತಂಡದ ಗಗನ್ ದೀಪ್ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಂಶುಪಾಲೆ ಭಗಿನಿ ಅನಿತಾ ಅವರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕರಾದ ಹರೀಶ್ ತರಬೇತಿ ನೀಡಿರುತ್ತಾರೆ.