ಸೆ.13: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ, ವಿದ್ಯಾನಿಧಿ-ಧನಸಹಾಯ ವಿತರಣೆ

0

ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ 2024- 25 ನೇ ಸಾಲಿನ ವಾರ್ಷಿಕ ಮಹಾಸಭೆ ಸೆ. 13 ರಂದು ಪೂರ್ವಹ್ನ 10.30 ರಿಂದ ಪುತ್ತೂರು ದರ್ಬೆ ಪ್ರಶಾಂತ್ ಮಹಲ್‌ನ ಸನ್ನಿಧಿ ಹಾಲ್‌ನಲ್ಲಿ ಜರಗಲಿದೆ.

ಬಳಿಕ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಮತ್ತು ಕಡಬ ತಾಲೂಕಿನ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಆಯ್ದ ಸರಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ-ಧನಸಹಾಯ ವಿತರಣೆ ಸಮಾರಂಭ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ, ಉಪಾಧ್ಯಕ್ಷ ಎನ್.ಸುಂದರ ರೈ ಹಾಗೂ ಮಹಾಪ್ರಬಂಧಕ ವಸಂತ್ ಜಾಲಾಡಿ ಮತ್ತು ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here