ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನೆ

0

ಎನ್‌ಎಸ್‌ಎಸ್ ಚಟುವಟಿಕೆಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ-ಡಾ| ಮಹೇಶ್ ಕುಮಾರ್ ಶೆಟ್ಟಿ
ಆತ್ಮಸಂತೃಪ್ತಿ ನೀಡುವ ಸೇವೆ ನಮ್ಮಿಂದಾಗಲಿ-ಡಾ| ಆಂಟನಿ ಪ್ರಕಾಶ್ ಮೊಂತೇರೊ

ಪುತ್ತೂರು: ವಿದ್ಯಾರ್ಥಿಗಳು ಸಮಾಜದ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳನ್ನು ಪರಿಹರಿಸುವಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಎನ್‌ಎಸ್‌ಎಸ್ ಚಟುವಟಿಕೆಗಳು ಕೇವಲ ಪಠ್ಯೇತರ ಚಟುವಟಿಕೆಗಳಲ್ಲ, ಬದಲಾಗಿ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಎಂದು ಉಜಿರೆ ಎಸ್‌ಡಿಎಂ ಕಾಲೇಜಿನ ಉಪನ್ಯಾಸಕರಾದ ಡಾ| ಮಹೇಶ್ ಕುಮಾರ್ ಶೆಟ್ಟಿ ಹೆಚ್. ಹೇಳಿದರು.

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ನಡೆದ ಎನ್‌ಎಸ್‌ಎಸ್ ಘಟಕದ ವಾರ್ಷಿಕ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ| ಆಂಟನಿ ಪ್ರಕಾಶ್ ಮೊಂತೇರೊ ಮಾತನಾಡಿ ಮಾನವಕುಲಕ್ಕೆ ಸೇವೆ ಸಲ್ಲಿಸುವುದು ಅತ್ಯಂತ ಶ್ರೇಷ್ಠ ಕಾರ್ಯ. ಸೇವೆಯು ಕೇವಲ ಪ್ರದರ್ಶನಕ್ಕಾಗಲ್ಲ, ಬದಲಾಗಿ ಹೃದಯಪೂರ್ವಕವಾಗಿ ಇರಬೇಕು. ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ಸೇವೆ ಮಾಡುವ ಮೂಲಕ ಸಮಾಜವನ್ನು ಉತ್ತಮಗೊಳಿಸಲು ಪ್ರಯತ್ನಿಸಬೇಕು ಎಂದು ಹೇಳಿದರು. ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ|ಚಂದ್ರಶೇಖರ್ ಕೆ. ಪ್ರಾಸ್ತಾವಿಕ ಮಾತನಾಡಿ ಯಾವುದೇ ವೈಫಲ್ಯವನ್ನು ಯಶಸ್ಸಿಗೆ ಮೆಟ್ಟಿಲು ಎಂದು ಪರಿಗಣಿಸಬೇಕು. ಜೀವನದಲ್ಲಿ ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು. ಎನ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳ ಬೆಳವಣಿಗೆ ಸಾಧ್ಯ ಎಂದು ಹೇಳಿದರು.

ಎನ್‌ಎಸ್‌ಎಸ್ ಅಧಿಕಾರಿಗಳಾದ ಪುಷ್ಪ ಎನ್. ಸ್ವಾಗತಿಸಿ, ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಜಿ. ಲವಿಕ ವಂದಿಸಿದರು. ಎನ್‌ಎಸ್‌ಎಸ್ ವಿದ್ಯಾರ್ಥಿಗಳಾದ ಅಪರ್ಣ ಮತ್ತು ತಂಡದವರು ಪ್ರಾರ್ಥಿಸಿ, ದ್ವಿತೀಯ ಬಿಎಸ್‌ಸಿ ವಿದ್ಯಾರ್ಥಿನಿ ಸುಷ್ಮಾ ವಾಗ್ಲೆ ಕೆ.ವೈ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ವಿಜಯಕುಮಾರ ಎಂ., ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್. ರೈ, ಯಕ್ಷಕಲಾ ಕೇಂದ್ರದ ನಿರ್ದೇಶಕ ಪ್ರಶಾಂತ್ ರೈ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ| ರಾಧಾಕೃಷ್ಣ ಗೌಡ ವಿ., ಉಪನ್ಯಾಸಕರಾದ ಡಾ| ನಾರ್ಬಟ್ ಮಸ್ಕರೇನಸ್ , ಧನ್ಯ ಪಿ.ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

LEAVE A REPLY

Please enter your comment!
Please enter your name here