ರಾಮಕುಂಜ: ಇಲ್ಲಿನ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ಆಶ್ರಯದಲ್ಲಿ ಸೆ.11ರಂದು ನಡೆದ ಪುತ್ತೂರು ತಾಲೂಕು ಮಟ್ಟದ 14ರ ವಯೋಮಾನದ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಹಳೆನೇರೆಂಕಿ ಸರಕಾರಿ ಉನ್ನತ ಹಿ.ಪ್ರಾ.ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದೆ. ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು ತಂಡದ ಐವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ಮುಖ್ಯಶಿಕ್ಷಕ ಸಾಂತಪ್ಪ ವೈ.ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ರಾಮಣ್ಣ ಬಿ.ತರಬೇತಿ ನೀಡಿದ್ದರು.