ರಾಮಕುಂಜ: ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಇದರ ಸಹಯೋಗದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಈ ಪಂದ್ಯಾಟದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಧನ್ವಿ ಯಂ., ಬೆಸ್ಟ್ ರೈಡರ್ ಪ್ರಶಸ್ತಿಯನ್ನು ರಮ್ಯಾ ಕೆ.ಎಸ್. ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ., ಜಸ್ವಂತ್ ಹಾಗೂ ಮಂಜುನಾಥ್ ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ, ಶಾಲಾ ಮುಖ್ಯಗುರು ಸತೀಶ್ ಭಟ್ ಮಾರ್ಗದರ್ಶನ ನೀಡಿದ್ದರು.