ನೆಲ್ಯಾಡಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂಧತ್ವ ವಿಭಾಗ ಇವರ ಆಶ್ರಯದಲ್ಲಿ ಕಣ್ಣಿನ ತಪಾಸಣೆ ಶಿಬಿರ ಸೆ.6ರಂದು ಕಾಂಚನ ಶ್ರೀ ಲಕ್ಷ್ಮೀನಾರಾಯಣ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಕಾಂಚನ ಪ್ರೌಢಶಾಲೆಯ ಮುಖ್ಯಗುರು ರಮೇಶ್ ಮಯ್ಯ ಉದ್ಘಾಟಿಸಿ ಕಣ್ಣಿನ ಅವಶ್ಯಕತೆ, ರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅತಿಥಿಯಾಗಿದ್ದ ವೈದ್ಯ ಡಾ. ರಾಮಚಂದ್ರರವರು ಕಣ್ಣಿನ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯಗುರು ಎ.ಲಕ್ಷ್ಮಣ ಗೌಡರವರು, ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆಯಿಂದ ಆಗುವಂತಹ ಕಣ್ಣಿನ ತೊಂದರೆಗಳು ಹಾಗೂ ಕಣ್ಣಿನ ರಕ್ಷಣೆಯ ಕುರಿತು ಹೇಳಿದರು. ಶಾಲೆಯ ಹಿರಿಯ ಶಿಕ್ಷಕ ರಾಜಶೇಖರಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಹ ಶಿಕ್ಷಕಿಯರಾದ ಪ್ರತಿಭಾ ಸ್ವಾಗತಿಸಿ, ಮಹಾಲಕ್ಷ್ಮೀ ವಂದಿಸಿದರು. ಸಹಶಿಕ್ಷಕಿ ಸುಮಾ ನಿರೂಪಿಸಿದರು. ಉದ್ಘಾಟನಾ ಕಾರ್ಯಕ್ರಮದ ನಂತರ ಊರಿನ ನಾಗರಿಕರು, ಪೋಷಕರು ಹಾಗೂ ವಿದ್ಯಾರ್ಥಿಗಳಿ ಕಣ್ಣಿನ ಪರೀಕ್ಷೆ ನಡೆಸಲಾಯಿತು.