ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಡಬ ಮತ್ತು ಜೆ.ಸಿ.ಐ ನೆಲ್ಯಾಡಿ ವಲಯದ ಆಶ್ರಯದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆಲ್ಯಾಡಿ ಸಂತಜಾರ್ಜ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ವಹಿಸಿದ್ದರು. ಸಂತಜಾರ್ಜ್ ಪ.ಪೂ. ಕಾಲೇಜಿನ ಪ್ರಾಂಶುಪಾಲ ಏಲಿಯಾಸ್ ಉದ್ಘಾಟಿಸಿ ಮಕ್ಕಳಿಗೆ ಮಾರ್ಗದರ್ಶನ ನೀಡಿದರು. ನ್ಯಾಯವಾದಿ ಇಸ್ಮಾಯಿಲ್ ನೆಲ್ಯಾಡಿ, ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯದ ಸದಸ್ಯ ಜಿ.ವರ್ಗಿಸ್, ಪ್ರಗತಿಬಂಧು ಸ್ವ ಸಹಾಯ ಸಂಘಗಳ ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕಟ್ಟೆಮಜಲು ಒಕ್ಕೂಟದ ಅಧ್ಯಕ್ಷ ಮಾರ್ಸೆಲ್ ಡಿ.ಸೋಜ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಡಬ ತಾಲೂಕು ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿಗುತ್ತು ಅವರು, ಮಾದಕ ವಸ್ತುಗಳು ಮತ್ತು ಇನ್ನಿತರ ದುಶ್ಚಟಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.
ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ಬಿ.ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಜೆಸಿಐ ಯೋಜನಾ ನಿರ್ದೇಶಕ ವಿನ್ಯಾಸ್ ಬಂಟ್ರಿಯಾಲ್, ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿಗಳಾದ ನಮಿತಾ ಎಸ್ ಶೆಟ್ಟಿ, ಮೋಹಿನಿ, ಸುಮನ ಎಸ್., ಹೇಮಾವತಿ ಜೆ, ವೇದಾ ಪಿ.ಸಹಕರಿಸಿದರು.