ರಾಮಕುಂಜ: ಮೈಸೂರು ವಿಭಾಗಮಟ್ಟದ ಕಬಡ್ಡಿ ಪಂದ್ಯಾಟ, ಆಳ್ವಾಸ್ ಸಾಂಸ್ಕೃತಿಕ ವೈಭವದ ಆಮಂತ್ರಣ ಪತ್ರ ಬಿಡುಗಡೆ

0

ರಾಮಕುಂಜ: ಸೆ.27 ಮತ್ತು 28ರಂದು ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ಶ್ರೀ ರಾಮಕುಂಜೇಶ್ವರ ಕ್ರೀಡಾಂಗಣದಲ್ಲಿ ನಡೆಯಲಿರುವ ಮೈಸೂರು ವಿಭಾಗ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ, ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಖ್ಯಾತಿಯ ಆಳ್ವಾಸ್ ಸಾಂಸ್ಕೃತಿಕ ವೈಭವ, ಅಭಿನಂದನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸೆ.13ರಂದು ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಬಿಡುಗಡೆಗೊಳಿಸಲಾಯಿತು.


ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಉಪಾಧ್ಯಕ್ಷರೂ, ಪುತ್ತೂರಿನ ಸ್ವರ್ಣೋದ್ಯಮಿಯೂ ಆಗಿರುವ ಬಲರಾಮ ಆಚಾರ್ಯ, ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಡಾ.ಶ್ರೀಪ್ರಕಾಶ್, ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟ ಆಯೋಜನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಕೆ.ಎಸ್., ಸಂಚಾಲಕ ಕೇಶವ ಅಮೈ ಎಸ್‌ಆರ್‌ಕೆ, ಪ್ರಚಾರ ಸಮಿತಿ ಸಂಚಾಲಕ ಗಣೇಶ್ ಕಟ್ಟಪುಣಿ, ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕೆ., ಪ್ರೌಢಶಾಲಾ ಮುಖ್ಯಶಿಕ್ಷಕ ಸತೀಶ್ ಭಟ್ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಸೆ.೧೨ರಂದು ಬೆಳಿಗ್ಗೆ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ಆಮಂತ್ರಣ ಪತ್ರವಿಟ್ಟು ಸಮರ್ಪಣೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here