ಪುತ್ತೂರು: ಕೊಳ್ತಿಗೆ ಗ್ರಾಮ ಪಂಚಾಯತ್ ಚಿಗುರು ಸಂಜೀವಿನಿ ವಾರ್ಷಿಕ ಮಹಾಸಭೆಯು ಸೆ.11ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಒಕ್ಕೂಟದ ಅಧ್ಯಕ್ಷರಾದ ನಳಿನಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಒಕ್ಕೂಟದ ಸಿಬ್ಬಂದಿಗಳು ಪ್ರಾರ್ಥನೆಯೊಂದಿಗೆ ಸಭೆಗೆ ಚಾಲನೆ ನೀಡಿದರು. ಪ್ರಾಥಮಿಕ ಅರೋಗ್ಯ ಕೇಂದ್ರದ ಸಿ.ಹೆಚ್.ಒ ಲೀಲಾವತಿ ಮುಟ್ಟಿನ ಕಫ್ ಬಳಕೆ ಬಗ್ಗೆ ಮಾಹಿತಿ ನೀಡಿದರು.
FLCRP ಗೀತಾ ಮೇಡಂ ಬ್ಯಾಂಕ್ ಲೋನ್ ವಿಮೆ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಜಗತ್ ಒಕ್ಕೂಟದ ಮುಖ್ಯ ಉದ್ದೇಶ ಸರ್ಕಾರದ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವ ಬಗ್ಗೆ ಮಾಹಿತಿ ನೀಡುದರು ಹಾಗೂ ಮಹಿಳೆಯರು ಆರ್ಥಿಕ ಸಾಮಾಜಿಕವಾಗಿ ಸ್ವಾವಲಂಬಿಗಾಳಗಬೇಕು ಹಲವು ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಮಹಿಳೆಯರು ಮುಂದೆ ಬರಬೇಕು ಸ್ವ ಉದ್ಯೋಗ ಮಾಡಿ ಆದಾಯ ಗಳಿಸುವಂತಗಬೇಕು ಘನತ್ಯಾಜ್ಯ ನಿರ್ವಹಣೆಯ ಬಗ್ಗೆ ಅರೋಗ್ಯ ಪೌಷ್ಟಿಕ ಆಹಾರದ ಬಗ್ಗೆ ಹಾಗೂ ಮಹಿಳೆಯ ಬೇಡಿಕೆಗಳನ್ನು ಈಡೇರಿಸಲು ಸಂಜೀವಿನಿ ಒಕ್ಕೂಟ ಕೆಲಸ ಮಾಡುತಿದೆ ಎಂಬುದನ್ನು ತಿಳಿಸಿದರು.
ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಪೌಷ್ಟಿಕ ಆಹಾರ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡಲಾಯಿತು. ಆಟೋಟ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಉತ್ತಮ ಸಂಘವನ್ನು ಗುರುತಿಸಿ 3 ಸಂಘಕ್ಕೆ ಬಹುಮಾನ ನೀಡಲಾಯಿತು. ಘಟಕ ಸಿಬ್ಬಂದಿ ಸುಮಾ ರವರನ್ನು ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸದಸ್ಯರು ಮನೆಯಲ್ಲೇ ತಯಾರಿಸಿದ ಉತ್ಪನ್ನಗಳನ್ನು ತಂದು ಮಾರಾಟ ಮಾಡಲಾಗಿತ್ತು. ಒಕ್ಕೂಟದ ಅಧ್ಯಕ್ಷರಾದ ನಳಿನಿ ಮಹಿಳೆಯರ ಸಬಲೀಕರಣದ ಬಗ್ಗೆ ಮಾತಾಡಿದರು.
ವೇದಿಕೆಯಲ್ಲಿ ವಲಯ ಮೇಲ್ವಿಚಾರಕಿ ನಳಿನಾಕ್ಷಿ, ಪಂಚಾಯತ್ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಪ್ರಾಥಮಿಕ ಅರೋಗ್ಯ ಕೇಂದ್ರದ ಸುರಕ್ಷಾ ಅಧಿಕಾರಿ ಅಕ್ಷತಾ ಉಪಸ್ಥಿತರಿದ್ದರು. ಸಭೆಯಲ್ಲಿ ಸಂಜೀವಿನಿ ಸಂಘದ ಸದಸ್ಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಆಶಾಕಾರ್ಯಕರ್ತರು ಉಪಸ್ಥಿತರಿದ್ದರು. ವಾರ್ಷಿಕ ವರದಿಯನ್ನು ಒಕ್ಕೂಟದ ಕಾರ್ಯದರ್ಶಿ ಪೂರ್ಣಿಮಾ ಮಂಡಿಸಿದರು. ವಾರ್ಷಿಕ ಲೆಕ್ಕ ಪತ್ರ ವರದಿಯನ್ನು ಜೊತೆ ಕಾರ್ಯದರ್ಶಿ ಸಹನಾ ಮಂಡಿಸಿದರು. ನಳಿನಿ ಒಕ್ಕೂಟದ ಪದಾಧಿಕಾರಿ ಧನ್ಯವಾದ ನೀಡಿದರು. ಕೋಶಾಧಿಕಾರಿ ವಿಶಾಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು.