ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಜಿ.ಎಂ. ಕೀರ್ತಿ – ಪ್ರಥಮ

0


ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಉಡುಪಿ, ಕರ್ನಾಟಕಕ್ರೀಡಾ ಪ್ರಾಧಿಕಾರ, ಯುವ ಸಬಲೀಕರಣ ಮತ್ತುಕ್ರೀಡಾ ಇಲಾಖೆ, ಉಡುಪಿಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಜಿ.ಎಂ ಕೀರ್ತಿ ತ್ರಿವಿಧಜಿಗಿತದಲ್ಲಿ – ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಈಕೆ ಎತ್ತರ ಜಿಗಿತದಲ್ಲಿ – ತೃತೀಯ, 100ಮೀ ಹರ್ಡಲ್ಸ್ – ತೃತೀಯ ಸ್ಥಾನ ಪಡೆದಿದ್ದಾಳೆ. ಭಾಗವಹಿಸಿದವರಲ್ಲಿ ಈಕೆ ಅತ್ಯಂತ ಕಿರಿಯಳಾಗಿದ್ದು, ಈ ಸಾಧನೆಗೆ ಕ್ರೀಡಾಕೂಟದ ಆಯೋಜಕರು, ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯಗುರುಗಳು ಹಾಗೂ ಶಿಕ್ಷಕ ವೃಂದಅಭಿನಂದನೆ ಸಲ್ಲಿಸಿದ್ದಾರೆ. ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ದೈಹಿಕ ನಿರ್ದೇಶಕರಾದ ಬಾಲಚಂದ್ರ, ಶಾಲಾ ದೈಹಿಕ ಶಿಕ್ಷಕರಾದ ದಾಮೋದರ್, ಹರಿಣಾಕ್ಷಿ ಮತ್ತು ಕು. ಅಶ್ವಿತಾ ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here