ಬಡಗನ್ನೂರು: ಬೆಂಗಳೂರು ಬಿಲ್ಲವ ಅಸೋಸಿಯೇಷನ್ ವತಿಯಿಂದ ಸೆ.14ರಂದು ನಡೆದ ಸುವರ್ಣ ಸಂಭ್ರಮದ ಕಾರ್ಯಕ್ರಮದಲ್ಲಿ ಬೆಂಗಳೂರು ಬಿಲ್ಲವರ ಅಸೋಸಿಯೇಷನ್ ಮಾಜಿ ಅಧ್ಯಕ್ಷ, ನಿವೃತ್ತ ಪೋಲಿಸ್ ವರಿಷ್ಟಾಧಿಕಾರಿ ಪೀತಾಂಬರ ಹೆರಾಜೆ ರವರನ್ನು ಬೆಂಗಳೂರು ಬಿಲ್ಲವ ಭವನದಲ್ಲಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಇದರ ಮಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಸಂಘದ ಗೌರವಾಧ್ಯಕ್ಷ ಗೋಪಾಲಕೃಷ್ಣ ನೆಕ್ಕಿದಪುಣಿ, ಅಧ್ಯಕ್ಷ ಎಮ್ ವೇದ ಕುಮಾರ, ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷೆ ಜಯಂತಿವಿಜಯ ಕೃಷ್ಣ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಕೋಶಾಧಿಕಾರಿ ಜಯನಂದ ಪೂಜಾರಿ, ಜೊತೆ ಕಾರ್ಯದರ್ಶಿ ಎಂ ಕೆ ದಾಮೋದರ್ ಸುವರ್ಣ, ಸಂಘಟನಾ ಕಾರ್ಯದರ್ಶಿ ಕೆ ನಾರಾಯಣ ಪೂಜಾರಿ, ಮಹಿಳಾ ಅಧ್ಯಕ್ಷೇ ಹರಿಣಿ ಹಾಗೂ ಮತ್ತಿತರರು ಗಣ್ಯರು ಉಪಸ್ಥಿತರಿದ್ದರು.