ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕನ ಬಂಧನ : ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ಬೆಳಂದೂರು ಕಾಲೇಜು ವಿದ್ಯಾಭಿಮಾನಿ ಸಂಘದಿಂದ ಅಭಿನಂದನೆ

0

ಕಾಣಿಯೂರು: ಕಾಣಿಯೂರು ಪುಣ್ಚತ್ತಾರು ಸಮೀಪ ಕೆಲದಿನಗಳ ಹಿಂದೆ ಕಾಲೇಜು ವಿದ್ಯಾರ್ಥಿನಿ ರಸ್ತೆ ಬದಿ ನಡೆದುಕೊಂಡು ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದ ಬೆಳ್ಳಾರೆ ಪೊಲೀಸರ ಯಶಸ್ವಿ ಕಾರ್ಯಾಚರಣೆಗೆ ಶ್ಲಾಘನೆ ವ್ಯಕ್ತವಾಗಿದ್ದು, ಈ ವಿಚಾರವಾಗಿ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿಧ್ಯಾಭಿಮಾನಿಗಳ ಸಂಘದ ವತಿಯಿಂದ ಬೆಳ್ಳಾರೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಡಿ.ಎನ್ ಈರಯ್ಯ ಹಾಗೂ ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿ ಕೃತಜ್ಞತೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರಾದ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಶುಭಾ ಆರ್. ನೋಂಡ, ಸೀತಾರಾಮ ಗೌಡ ಮುಂಡಾಳ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here