ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ

0


ಪುತ್ತೂರು: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರುಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ 14/17 ರ ವಯೋಮಾನದ ಬಾಲಕ ಬಾಲಕಿಯರ ಹ್ಯಾಂಡ್ ಬಾಲ್ ಪಂದ್ಯಾಟ ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರುಇಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪಂದ್ಯಾಟವನ್ನು ಉದ್ಘಾಟಿಸಿದ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿಇವರು, ಇಲಾಖೆ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಇಲಾಖೆಯ ಮೇಲಿನ ಗೌರವದಿಂದ ನಡೆಸಲು ಸಿದ್ದರಿರುವುದಾಗಿ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಚಕ್ರಪಾಣಿ ಬಜತ್ತೂರುಇವರು, ರಾಜ್ಯ ಮಟ್ಟದಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿಕೊಟ್ಟು ಸಂಸ್ಥೆಯು ಇಲಾಖೆಗೆ ಸಂಪೂರ್ಣ ಸಹಕಾರವನ್ನು ನೀಡಿ ಪೋತ್ಸಾಹಿಸಿರುವುದನ್ನು ಸ್ಮರಿಸುತ್ತಾ, ಪಂದ್ಯಾಟಕ್ಕೆ ಶುಭ ಹಾರೈಸಿದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ವಿಶ್ರಾಂತದೈಹಿಕ ಶಿಕ್ಷಣ ಶಿಕ್ಷಕರಾದ ದಯಾನಂದ ರೈ ಕೋರ್ಮಂಡ ಇವರು, ನಮ್ಮ ಜಿಲ್ಲೆಗೆ ಪ್ರಪ್ರಥಮವಾಗಿ ಹ್ಯಾಂಡ್ ಬಾಲ್ ಪಂದ್ಯಾಟವನ್ನು ಪರಿಚಯಿಸಿದವರು ಕಾವು ಹೇಮನಾಥ ಶೆಟ್ಟಿಯವರು ಸಹೋದರ ಸ್ವಾಮಿ ವಿವೇಕಾನಂದ ಪದವಿಪೂರ್ವಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೇಮನಾಥ ಶೆಟ್ಟಿಯವರು ಹಾಗೂ ಪುತ್ತೂರಿನಲ್ಲಿ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟವನ್ನು ಪ್ರಥಮವಾಗಿ ಸಂಘಟಿಸಿದ ಕೀರ್ತಿ ಶ್ರೀರಾಮಕೃಷ್ಣ ಪ್ರೌಢಶಾಲೆಗೆ ಸಲ್ಲುತ್ತದೆ ಎಂದು ತಿಳಿಸಿ ಪಂದ್ಯಾಟಕ್ಕೆ ಶುಭ ಹಾರೈಸಿದರು.

ಪ್ರಭಾರ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎಸ್‌ ರವರು ಸ್ವಾಗತಿಸಿದರು.ಶಿಕ್ಷಕರುಗಳಾದ ತುಳಸಿ ಹಾಗೂ ಅಜಿತ್‌ ರವರು ನಿರೂಪಿಸಿದ ಸಭಾಕಾರ‍್ಯಕ್ರಮವನ್ನು ಗೀತಾರೈ ಕೆ ಧನ್ಯವಾದದೊಂದಿಗೆ ಮುಕ್ತಾಯಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here