ಪುತ್ತೂರು: ಸೆ.19 ರಂದು ಪುತ್ತೂರು ತಾಲೂಕು ಪಂಚಾಯತ್ ನಲ್ಲಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಪುತ್ತೂರು ತಾಲೂಕಿನಲ್ಲಿ ನೋಂದಾವಣಿಗೆ ಅರ್ಜಿ ಸಲ್ಲಿಸಲು ಬಾಕಿ ಇರುವ ಅಥವಾ ಸಲ್ಲಿಸಿದ ಅರ್ಜಿಯ ಕುರಿತು ವಿಚಾರಿಸಲು ಅಥವಾ ಕುಂದು ಕೊರತೆಗಳ ನಿವಾರಣೆಯು ಪುತ್ತೂರು ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಶಿಬಿರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಜರಿರಲಿದ್ದು ಬೆಳಗ್ಗೆ 10 ರಿಂದ ಅಪರಾಹ್ನ 2ರವರೆಗೆ ನೋಂದಾವಣಿಗೆ ಅವಕಾಶ ಕಲ್ಪಿಸಲಾಗಿದೆ. ಅರ್ಜಿದಾರರು ಪಡಿತರ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕವನ್ನು ಕಡ್ಡಾಯವಾಗಿ ತರಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.