ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್) ವಿಟ್ಲ ಇದರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಪಡೆದುಕೊಂಡಿದೆ.
ತಂಡದಲ್ಲಿದ್ದ ತರುಣ್ ಕೃಷ್ಣ, ಭಗತ್, ಕುಶನ್, ಲತೇಶ್ ಇವರು ರಾಜ್ಯಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲು ಅರ್ಹತೆ ಗಳಿಸಿದ್ದಾರೆ. ಇವರಿಗೆ ತರಬೇತುದಾರರಾಗಿ ಮನೋಹರ್ ಮತ್ತು ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್, ಹರಿಣಾಕ್ಷಿ ಮತ್ತು ಅಶ್ವಿತಾ ತರಬೇತಿ ನೀಡಿದ್ದರು.