ಪುತ್ತೂರು: ಕುರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.17ರಂದು ಬೆಳಿಗ್ಗೆ 10 ಗಂಟೆಗೆ ಕುರಿಯ ರಾಜೀವಗಾಂಧಿ ಸೇವಾ ಕೇಂದ್ರ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ವಿನೋದ್ ಕುಮಾರ್ ರೈ ಕುರಿಯ ಏಳ್ನಾಡುಗುತ್ತುರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಘದ ಸದಸ್ಯರುಗಳು ಕ್ಲಪ್ತ ಸಮಯದಲ್ಲಿ ಆಗಮಿಸಿ ಸಭೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಘದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆ ಮಾರ್ಗದರ್ಶನಗಳನ್ನು ನೀಡಬೇಕಾಗಿ ಸಂಘದ ಆಡಳಿತ ಮಂಡಳಿಯ ಅನುಮತಿಯ ಮೇರೆಗೆ ಸಂಘದ ಪ್ರಭಾರ ಕಾರ್ಯದರ್ಶಿ ರಜನಿ ರಾಜೇಶ್ ತಿಳಿಸಿದ್ದಾರೆ.