ಪುತ್ತೂರು: ವಿವಿಧ ಅಪರಾಧ ಪ್ರಕರಣದಲ್ಲಿ ಸ್ವಾಧೀನ ಪಡಿಸಿಕೊಂಡ ಓಮ್ನಿ ಕಾರು, ಎರಡು ದ್ವಿಚಕ್ರ ವಾಹನವನ್ನು ನ್ಯಾಯಾಲಯದ ಆದೇಶದಂತೆ ಸೆ.18ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಎದುರು ಹರಾಜು ಮಾಡಲಾಗುವುದು.
2020ರಲ್ಲಿ ಅಕ್ರಮ ಜಾನುವಾರು ಸಾಗಾಟದಲ್ಲಿ ಮಹಜರು ಸಂದರ್ಭ ಓಮ್ನಿ ಕಾರು(ಕೆ.ಎ 19-ಎನ್ 0312) ಅನ್ನು ಸ್ವಾಧೀನಕ್ಕೆ ಪಡೆಯಲಾಗಿತ್ತು. ಬಳಿಕ ವಿವಿಧ ಅಪರಾಧ ಪ್ರಕರಣದಲ್ಲಿ ಕೆ.ಎ.19 ಯು 5215 ಮತ್ತು ಕೆ.ಎ.19 ಕೆ 0261 ದ್ವಿಚಕ್ರ ವಾಹನವನ್ನು ಸ್ವಾಧೀನ ಪಡಿಸಲಾಗಿತ್ತು. ಇದೀಗ ನ್ಯಾಯಾಲಯದ ಆದೇಶದಂತೆ ಹರಾಜು ಪ್ರಕ್ರಿಯೆಗೆ ಒಳಪಡಿಸಲಾಗಿದೆ. ಓಮ್ನಿ ಕಾರು, ಎರಡು ದ್ವಿಚಕ್ರ ವಾಹನಗಳು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಆವರಣದಲ್ಲಿ ಇದೆ. ಸೆ.18ಕ್ಕೆ ಬೆಳಿಗ್ಗೆ ಗಂಟೆ 11ಕ್ಕೆ ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತದೆ. ಸಾರ್ವಜನಿಕರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.