ಪ್ರಜೆಗಳು ತಮ್ಮ ಜವಾಬ್ದಾರಿಯನ್ನು ಅರಿತು ನಡೆದುಕೊಂಡಾಗ ಪ್ರಜಾಪ್ರಭುತ್ವ ಗಟ್ಟಿಯಾಗಲು ಸಾಧ್ಯ : ಲೆಫ್ಟಿಂನೆಂಟ್ ಈಶ್ವರ್ ನಾಯಕ್

0

ಬೆಟ್ಟಂಪಾಡಿ: ಪ್ರಜೆಗಳು ತಮ್ಮ ಜವಾಬ್ದಾರಿಯನ್ನು ಅರಿತು ಪ್ರಜಾಪ್ರಭುತ್ವದ ಆಶಯಗಳಿಗೆ ಸರಿಯಾಗಿ ನಡೆದುಕೊಂಡಾಗ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಲು ಸಾಧ್ಯ ಎಂದು ಎಸ್ ಎಸ್ ಹೆಚ್ ಎಸ್ ಎಸ್ ಕಾಟುಕುಕ್ಕೆಯ ರಾಜ್ಯಶಾಸ್ತ್ರ ಉಪನ್ಯಾಸಕರಾದ ಲೆಫ್ಟಿಂನೆಂಟ್ ಈಶ್ವರ್ ನಾಯಕ್ ಅವರು ಅಭಿಪ್ರಾಯಪಟ್ಟರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ಐ ಕ್ಯೂ ಎ ಸಿ ಮತ್ತು ರಾಜ್ಯ ಶಾಸ್ತ್ರ ವಿಭಾಗ ಜಂಟಿ ಆಶ್ರಯದಲ್ಲಿ ಸೆ.16ರಂದು ನಡೆದ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ ಸುಬ್ರಹ್ಮಣ್ಯ ಕೆ ಪ್ರಸ್ತಾವಿಕವಾಗಿ ಮಾತನಾಡಿ, ಪ್ರಜಾಪ್ರಭುತ್ವ ದಿನಾಚರಣೆ ಕೇವಲ ಆಚರಣೆಗೆ ಸೀಮಿತವಾಗದೆ ಪ್ರಜಾಪ್ರಭುತ್ವ ಮೌಲ್ಯಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುವಲ್ಲಿ ಪ್ರಜೆಗಳು ಪ್ರಮುಖ ಪಾತ್ರವಹಿಸಬೇಕಾಗಿದೆ ಎಂದು ಹೇಳಿದರು.

ಪ್ರಾಂಶುಪಾಲ ಪ್ರೊ. ದಾಮೋದರ ಕಣಜಾಲು ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರತಿಯೊಬ್ಬ ಪ್ರಜೆಯೂ ತಮ್ಮ ಜವಾಬ್ದಾರಿ ಅರಿತು ಯಾವುದೇ ಆಮಿಷ, ಒತ್ತಡಗಳಿಗೆ ಒಳಗಾಗದೆ ಮತ ಚಲಾಯಿಸಿದಾಗ ಪ್ರಜಾಪ್ರಭುತ್ವ ಸರಕಾರಗಳು ರಚಣೆಯಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಸಿಂಚನ, ಭಾಗ್ಯ, ಕೃತಿ ಪ್ರಾರ್ಥಿಸಿದರು. ಕೃತಿ ಸ್ವಾಗತಿಸಿದರು. ಲತೀಕ ಧನ್ಯವಾದ ಸಮರ್ಪಿಸಿದರು. ಮಮತಾ ಕಾರ್ಯಕ್ರಮ ನಿರೂಪಿಸಿದರು. ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ ಉದಯ ಶಂಕರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಐಕ್ಯೂಎಸಿ ಸಂಚಾಲಕ ಪ್ರೊ ರಾಮಚಂದ್ರ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here