ಬಸ್ಸಿನಲ್ಲಿ ಯುವತಿಗೆ ಕಿರುಕುಳ – ಆರೋಪಿತನಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ 

0

ಪುತ್ತೂರು: 3 ವರ್ಷದ ಹಿಂದೆ ಪುತ್ತೂರು ಸುಳ್ಯ ಮಧ್ಯೆ ಚಲಿಸುತ್ತಿದ್ದ ಬಸ್ ನಲ್ಲಿ ಯುವತಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿತನಿಗೆ ಪುತ್ತೂರು ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಆರೋಪಿತ ಮಾಡ್ನೂರು ಗ್ರಾಮದ ಮಹಮದ್ ಸತ್ತಾರ್ ಜೈಲು ಶಿಕ್ಷೆಗೆ ಒಳಗಾದವ. 2022 ರ ಏ.25 ರಂದು ಬೆಳಗ್ಗೆ  ಕೆ ಎಸ್ ಆರ್ ಟಿ ಸಿ ಬಸ್‌ ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ವೇಳೆ ಯುವತಿ ಕುಳಿತಿದ್ದ ಸೀಟಿನ ಪಕ್ಕಕ್ಕೆ ಕುಳಿತಿದ್ದ ಮೊಹಮ್ಮದ್ ಸತ್ತಾರ್ ಕಿರಿಕುಳ ನೀಡಿರುವ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿ ಪುತ್ತೂರು ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರಾಗಿದ್ದ ರಾಜೇಶ್ ಕೆವಿ  ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದಲ್ಲಿ ಪ್ರಧಾನ ಹಿರಿಯ ಸಿವಿಲ್ ಮತ್ತು ಎ ಸಿ ಜೆ ಎಂ ನ್ಯಾಯಾಲಯದ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣಪುರ್ ರವರು ಆರೋಪಿಯ ಮೇಲೆ ಆರೋಪ ಸಾಬೀತಾಗಿದೆ ಎಂದು 4 ತಿಂಗಳಗಳ ಜೈಲು ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಶಿಕ್ಷೆಯಲ್ಲಿ ರೂ. 10ಸಾವಿರ ದಂಡ ನೀಡಲು ತಪ್ಪಿದಲ್ಲಿ 1 ತಿಂಗಳ ಕಾಲ ಹೆಚ್ಚುವರಿ ಕಾರಗೃಹವಾಸ ಶಿಕ್ಷೆಯನ್ನು ವಿಧಿಸಲಾಗಿದೆ. ಪ್ರಾಸಿಕ್ಯೂಷನ್  ಪರ ಸಹಾಯಕ ಸರಕಾರಿ ಅಭಿಯೋಜಕಿ ಕವಿತಾ ಕೆ ರವರು ವಾದಿಸಿದರು.

LEAVE A REPLY

Please enter your comment!
Please enter your name here