ನೆಲ್ಯಾಡಿ: ಹಾಲು ಉತ್ಪಾದಕರ ಸಹಕಾರಿ ಸಂಘ ನೆಲ್ಯಾಡಿ ಇದರ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ಗುರುಪ್ರಸಾದ್ ಕೆ.ಅವರ ಅಧ್ಯಕ್ಷತೆಯಲ್ಲಿ ಸೆ.18ರಂದು ಬೆಳಿಗ್ಗೆ 10.30ಕ್ಕೆ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಸಭೆಗೆ ಅತಿಥಿಗಳಾಗಿ ಒಕ್ಕೂಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಂಘದ ಸದಸ್ಯರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುರಾಧ ಹೆಚ್.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.