ನೆಲ್ಯಾಡಿ: ಪಿಎಂಶ್ರೀ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ನೆಲ್ಯಾಡಿ ಇಲ್ಲಿ ಶಾಲೆಯ 75ನೇ ವರ್ಷಾಚರಣೆಯ ಸಮಿತಿ ರಚನೆಗಾಗಿ ಸಮಾಲೋಚನಾ ಸಭೆ ಸೆ.18ರಂದು ಮಧ್ಯಾಹ್ನ 2 ಗಂಟೆಗೆ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಜನಪ್ರತಿನಿಧಿಗಳು, ಪೂರ್ವವಿದ್ಯಾರ್ಥಿಗಳು, ಊರ ವಿದ್ಯಾಭಿಮಾನಿಗಳು, ಹಿತೈಷಿಗಳು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡುವಂತೆ ಶಾಲಾ ಎಸ್ಡಿಎಂಸಿ ಅಧ್ಯಕ್ಷ ದಿನಕರ ಕೆ.ಹೆಚ್., ಮುಖ್ಯಶಿಕ್ಷಕಿ ವೀಣಾ ಮಸ್ಕರೇನಸ್ ಹಾಗೂ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇಸ್ಮಾಯಿಲ್ ನೆಲ್ಯಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.