ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ದ.ಕ. ಜಿಲ್ಲೆ, ಮಂಗಳೂರು, ಮತ್ತು ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆ ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಈಜು ಸ್ಪರ್ಧೆಯ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಲಿಖಿತ್ ಎಸ್ ಗೌಡ 1೦೦ಮೀ ಬ್ರೆಸ್ಟ್ ಸ್ಟ್ರೋಕ್ ಮತ್ತು 50ಮೀ ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಪುತ್ತೂರಿನ ಬಾಲವನ ಈಜುಕೊಳದ ತರಬೇತುದಾರರಾದ ಸೀತಾರಾಮ ಗೌಡ ಮತ್ತು ನಳಿನಿ ಕೆ ದಂಪತಿಗಳ ಪುತ್ರ.
