ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಎಕ್ಸಲೆಂಟ್ ಪದವಿಪೂರ್ವ ಕಾಲೇಜು, ಮೂಡಬಿದ್ರೆ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆತ್ಮಿಕಾ ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.
ಜತೆಗೆ ಕಾಲೇಜಿನ ಬಾಲಕಿಯರ ತಂಡವು ತೃತೀಯ ಸ್ಥಾನ ಪಡೆದಿರುತ್ತದೆ.ತಂಡದಲ್ಲಿ ದ್ವಿತೀಯ ಪಿಯುಸಿಯ ಶ್ರೇಯಾ ಎಂ, ಪ್ರಥಮ ಪಿಯುಸಿಯ ಎಚ್. ಮನ್ಮಿತಾ, ಆತ್ಮಿಕಾ, ಶರಣ್ಯ ಎಚ್.ಎನ್ ಭಾಗವಹಿಸಿದ್ದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ.ಎಸ್, ಡಾ. ಜ್ಯೋತಿ ಕುಮಾರಿ, ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.