ಪುತ್ತೂರು: ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದ ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಇದರ ಆಶ್ರಯಲ್ಲಿ ನಡೆದ ರಾಜ್ಯ ಮಟ್ಟದ ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ಅಧ್ಯಕ್ಷೆ ಮಲ್ಲಿಕಾ ಜೆ.ರೈಯವರಿಗೆ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇವರು ಕವಯತ್ರಿ, ಬರಹಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ.