ಪುತ್ತೂರು: ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆದ ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಇದರ ಆಶ್ರಯಲ್ಲಿ ನಡೆದ ರಾಜ್ಯ ಮಟ್ಟದ ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸುಂದರ ಸಾರ್ಯರವರಿಗೆ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇವರು ಯುವ ಸಾಹಿತಿಯಾಗಿದ್ದು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಗ್ರಂಥಾಲಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
