ಪುತ್ತೂರು: ಕೆಯ್ಯೂರು ಗ್ರಾಮದ ಕಣಿಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ಪಂಚಾಯತ್‌ರಾಜ್ಯ ಇಂಜಿನಿಯರಿಂಗ್ ಇಲಾಖೆಯಿಂದ ರೂ.14.50 ಲಕ್ಷ ಅನುದಾನ ಮಂಜೂರುಗೊಂಡಿದ್ದು ಶಾಲಾ ಕಟ್ಟಡಕ್ಕೆ ಪುತ್ತೂರು ವಿಧಾನಸಭಾ ಶಾಸಕ ಅಶೋಕ್ ಕುಮಾರ್ ರೈಯವರು ಸೆ.13 ರಂದು ಶಂಕುಸ್ಥಾಪನೆ ನೆರವೇರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕೆಯ್ಯೂರು ಕ್ಲಸ್ಟರ್‌ನ ಸಿಆರ್‌ಪಿ ಶಶಿಕಲಾ, ಕೆಯ್ಯೂರು ಶ್ರೀಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ.ಕೆ ಜಯರಾಮ ರೈ, ಕೆಯ್ಯೂರು ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ನಮಿತಾ ಎ.ಕೆ, ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ, ಸದಸ್ಯರುಗಳಾದ ಜಯಂತ ಪೂಜಾರಿ ಕೆಂಗುಡೇಲು, ಬಟ್ಯಪ್ಪ ರೈ ದೇರ್ಲ, ಅಬ್ದುಲ್ ಖಾದರ್ ಮೇರ್ಲ, ಗಿರಿಜ ಕಣಿಯಾರು,ಮೀನಾಕ್ಷಿ ವಿ.ರೈ, ನೆಬಿಸಾ, ಮಾಜಿ ಸದಸ್ಯ ಕಿಟ್ಟ ಅಜಿಲ ಕಣಿಯಾರು, ಕೆಪಿಎಸ್ ಉಪ ಪ್ರಾಂಶುಪಾಲ ವಿನೋದ್ ಕುಮಾರ್ ಕೆ.ಎಸ್, ಕೆಪಿಎಸ್ ಮುಖ್ಯಗುರು ಬಾಬು, ಕಣಿಯಾರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಮೋಹನ್ ಗೌಡ ಕಣಿಯಾರು ಮತ್ತು ಸದಸ್ಯರುಗಳು ಹಾಗೇ ಗ್ರಾಮಸ್ಥರು ಉಪಸ್ಥಿತರಿದ್ದರು. ಶಿಕ್ಷಕ ಗಂಗಾಧರ್ ಸ್ವಾಗತಿಸಿ, ಮುಖ್ಯಗುರು ವಸಂತಿ ವಂದಿಸಿದರು.