ಪುತ್ತೂರು: ಮುಕ್ರಂಪಾಡಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜ್ನಲ್ಲಿ ತುಳು ಕೂಟ ಕುವೈಟ್ ಸಂಘದ ಬೆಳ್ಳಿ ಹಬ್ಬದ ಸ್ಮರಣಾರ್ಥ ಕೊಡಮಾಡುವ ವಿದ್ಯಾರ್ಥಿ ವೇತನ ವಿತರಣಾ ಕಾಠ್ಯಕ್ರಮ ನಡೆಯಿತು. 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿರುವ ವಾಣಿಜ್ಯ ವಿಭಾಗದ ಪ್ರಥ್ವಿ ಕೆ ಇವರಿಗೆ ರೂ.1೦೦೦೦/- ನಗದು ಬಹುಮಾನ ಮತ್ತು ಪ್ರಮಾಣಪತ್ರವನ್ನು ನೀಡಿ ಪುರಸ್ಕರಿಸಲಾಯಿತು.

ತುಳು ಕೂಟ ಕುವೈಟ್ ಸಂಘದ ಸದಸ್ಯರಾದ ಚಂದ್ರಹಾಸ ಶೆಟ್ಟಿ, ರಘುನಾಥ ಶೆಟ್ಟಿ ಮತ್ತು ಶಿವರಾಮ ರೈ ಕಡಬ ವಿದ್ಯಾರ್ಥಿವೇತನವನ್ನು ವಿತರಿಸಿದರು. ಚಂದ್ರಹಾಸ ಶೆಟ್ಟಿ ಇವರು ತುಳು ಕೂಟ ಕುವೈಟ್ ಈ ಸಂಸ್ಥೆಯ ಕಿರು ಪರಿಚಯ ನೀಡುವ ಮೂಲಕ ಪ್ರಸ್ತುತ ವರ್ಷದ ವಿದ್ಯಾರ್ಥಿನಿಯರಿಗೆ ಉತ್ತಮ ಅಂಕಗಳನ್ನು ಗಳಿಸುವ ಮೂಲಕ ಈ ವಿದ್ಯಾರ್ಥಿ ವೇತನವನ್ನು ಪಡೆಯುವಂತೆ ಹುರಿದುಂಬಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರಮೀಳ ಜೆಸ್ಸಿ ಕ್ರಾಸ್ತಾ ರವರು ವಿದ್ಯಾರ್ಥಿ ವೇತನ ಪ್ರಾಯೋಜಕರಿಗೆ ಕೃತಜ್ಞತೆ ಸಲ್ಲಿಸುವುದರ ಜೊತೆಗೆ ಇಂತಹ ವಿದ್ಯಾರ್ಥಿ ವೇತನಗಳು ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಆಶಾಕಿರಣವಾಗಲಿ ಎಂದು ಶುಭ ಹಾರೈಸಿದರು. ಕಾಲೇಜಿನ ಉಪನ್ಯಾಸಕವೃಂದದವರು ಉಪಸ್ಥಿತರಿದ್ದರು.