ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣಕ ವಿಜ್ಞಾನ ಸಂಘದ INNOVIXUS ಉದ್ಘಾಟನೆ

0

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣಕ ವಿಜ್ಞಾನ ಸಂಘದ INNOVIXUS ಸೆ.16ರಂದು ಉದ್ಘಾಟನೆಗೊಂಡಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸಹಾಯಕ ಪ್ರಾಧ್ಯಾಪಕರಾದ ರಾಗೇಶ್ ರಾಜು ಇವರು ನೆರವೇರಿಸಿ ಸಾಮಾಜಿಕ ಮಾಧ್ಯಮಗಳು ಮತ್ತು ಸೈಬರ್ ಜಾಗೃತಿ ಬಗ್ಗೆ ವಿದ್ಯಾರ್ಥಿಗಳಿಗೆ ಸಾಮಾಜಿಕ ಮಾಧ್ಯಮಗಳಿಂದ ಆಗುವ ಪ್ರಯೋಜನಗಳು ಮತ್ತು ದುರ್ಬಳಕೆಗಳು ಹಾಗೂ ಸೈಬರ್ ಅಪರಾಧಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು. ಡಿಜಿಟಲ್ ಜಗತ್ತಿನಲ್ಲಿ ಸುರಕ್ಷಿತವಾಗಿರಲು ಪ್ರತಿ ಹಂತದಲ್ಲಿಯೂ ಎಚ್ಚರಿಕೆಯಿಂದ ಇರುವುದು ಬಹಳ ಮುಖ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.


ಗಣಕವಿಜ್ಞಾನ ವಿಭಾಗದ ಮುಖ್ಯಸ್ಥೆ ಪ್ರತಿಭಾ ಭಟ್ ಇವರು IT ASSOCIATION ಇದರ ಪ್ರಾಮುಖ್ಯತೆ ಹಾಗೂ ಇದರಿಂದ ಆಗುವ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳಾದ ಅಡ್ವಕೇಟ್ ಅಶ್ವಿನ್.ಎಲ್ ಶೆಟ್ಟಿ ಯವರು ತಮ್ಮ ಅಧ್ಯಕ್ಷೀಯ ಮಾತಿನಲ್ಲಿ ತಂತ್ರಜ್ಞಾನವನ್ನು ಜೀವನದಲ್ಲಿ ಹೇಗೆ ಸದುಪಯೋಗಪಡಿಸುವುದು ಎಂದು ಇಂದಿನ ವಿದ್ಯಾರ್ಥಿಗಳು ಚೆನ್ನಾಗಿ ಅರಿತುಕೊಂಡರೆ ಮಾತ್ರ ಮುಂದಿನ ಜೀವನವು ಸುಗಮವಾಗಿ ಸಾಗುವುದೆಂದು ಅಭಿಪ್ರಾಯ ವ್ಯಕ್ತಪಡಿಸಿದರು.


ವೇದಿಕೆಯಲ್ಲಿ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜಲಕ್ಷ್ಮೀ ಎಸ್.ರೈ, ಉಪಪ್ರಾಂಶುಪಾಲರಾದ ಶೇಷಗಿರಿ ಎಂ, ಐ.ಕ್ಯೂ.ಎ.ಸಿ ಸಂಘಟಕರಾದ ಕೌಸಲ್ಯ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರತಿಭಾ ಭಟ್, ಮತ್ತು ಗಣಕ ವಿಜ್ಞಾನ ವಿಭಾಗ ವಿದ್ಯಾರ್ಥಿ ಸಂಘಟಕರಾದ ಸಂದೇಶ್ ಎಚ್.ಪಿ, ಪೂಜಾ ಎಸ್, ಸವಾದ್ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು ತೃತೀಯ ಬಿ.ಸಿ.ಎ ವಿದ್ಯಾರ್ಥಿಯಾದ ಸಂದೇಶ್ ಎಚ್.ಪಿ ಸ್ವಾಗತಿಸಿ, ತೃತೀಯ ಬಿ.ಸಿ.ಎ ವಿದ್ಯಾರ್ಥಿನಿಯಾದ ಪೂಜಾ ಎಸ್ ವಂದಿಸಿದರು. ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿಯಾದ ಪವಿತ್ರಾ ಕೆ. ಕಾರ್ಯಕ್ರಮವನ್ನು ನಿರ್ವಹಿಸಿದರು. ತೃತೀಯ ಬಿ.ಸಿ.ಎ ನಿತ್ಯಾಶ್ರೀ ಮತ್ತು ತಂಡದವರಿಂದ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು
ಕಾರ್ಯಕ್ರಮ ಡಿಜಿಟಲ್ ಉದ್ಘಾಟನೆಯ ಮೂಲಕ ನೆರವೇರಿತು.

LEAVE A REPLY

Please enter your comment!
Please enter your name here