ಕಾಣಿಯೂರು ಶಾಲೆಯಲ್ಲಿ ಶಿಕ್ಷಕರ ಆಭಾ ಕಾರ್ಡ್ ನೋಂದಾವಣೆ, ಆರೋಗ್ಯ ತಪಾಸಣೆ

0

ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಿಗಾಗಿ ಸ್ವಸ್ಥ ನಾರಿ ಸಶಕ್ತ ಪರಿವಾರ ಕಾರ್ಯಕ್ರಮದಡಿಯಲ್ಲಿ ಶಾಲೆಯ ಶಿಕ್ಷಕರ ಆಭಾ ಕಾರ್ಡ್ ನೋಂದಾವಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಆಶಾ ಅಬಿಕಾರ್ ಅವರು ಶಿಕ್ಷಕರ ಮತ್ತು ಅಡುಗೆ ಸಿಬ್ಬಂದಿಗಳ ಆರೋಗ್ಯ ತಪಾಸಣೆ ನಡೆಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಿಬ್ಬಂದಿಗಳಾದ ಪುಷ್ಪಲತಾ, ಜೆಲ್ಸಿ ಮತ್ತು ರೇಣುಕ ಸಹಕರಿಸಿದರು. ಶಾಲಾ ಪ್ರಭಾರ ಮುಖ್ಯಶಿಕ್ಷಕ ಬಾಲಕೃಷ್ಣ ಕೆ ಅವರು ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here