





ಪುತ್ತೂರು: ಅಕ್ಟೋಬರ್ 2 ರ ತನಕ 15 ದಿನಗಳ ಕಾಲ ನಡೆಯುವ ಸ್ವಚ್ಚತಾ ಹೀ ಸೇವಾ-ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನಕ್ಕೆ ಒಳಮೊಗ್ರು ಗ್ರಾಮ ಪಂಚಾಯತ್ನಿಂದ ಸೆ.17ರಂದು ಚಾಲನೆ ನೀಡಲಾಯಿತು.


ಒಳಮೊಗ್ರು ಗ್ರಾಮದ ಕುಂಬ್ರ ಭಜನಾ ಮಂದಿರದ ಸುತ್ತಮುತ್ತ ಸ್ವಚ್ಛತೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಕೆ, ಕಾರ್ಯದರ್ಶಿ ಜಯಂತಿ,ಗ್ರಂಥಾಲಯ ಮೇಲ್ವಿಚಾರಕಿ ಸಿರಿನಾ, ವರ್ತಕರ ಸಂಘದ ಕಾರ್ಯದರ್ಶಿ ಭವ್ಯ ರೈ, ಗ್ರಾ.ಪಂ ಸಿಬ್ಬಂದಿಗಳಾದ ಜಾನಕಿ, ಗುಲಾಬಿ ಸೇರಿದಂತೆ ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.







            





