ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ಸರ್ಕಾರದಿಂದ ದೊರಕಬೇಕಾದ ಸವಲತ್ತುಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸಹಾಯಕ ಆಯುಕ್ತರು ಮತ್ತು ತಹಶೀಲ್ದಾರ್ ಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಸ್ವಾತಂತ್ರ್ಯ ಯೋಧರು ಮತ್ತು ಅವರ ಅವಲಂಬಿತರು ಹಾಗೂ ಹುತಾತ್ಮ ಯೋಧರು ಮತ್ತು ಅವರ ಅವಲಂಬಿತರಿಗೆ ಸಂವಿಧಾನಾತ್ಮಕವಾಗಿ ನೀಡಬೆಕಾದ ಪರಿಹಾರವನ್ನು (ಜಮೀನು) ಕಲ್ಪಿಸುವಲ್ಲಿ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆ ತೋರಿದ ಆರೋಪ ಕೇಳಿ ಬಂದಿರುತ್ತದೆ.
ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸಕಾಲದಲ್ಲಿ ಕಲ್ಪಿಸಲು ಸರ್ಕಾರದ ವಿವಿಧ ಇಲಾಖೆಗಳಿಂದ ಪೂರಕ ಸ್ಪಂದನೆ ದೊರೆಯದೆ. ವಿನಾಕಾರಣ ಲೋಕಾಯುಕ್ತ ಹಾಗೂ ಇದು ಲೋಕಾಯುಕ್ತ ಕಾಯ್ದೆಯಡಿ ದುರಾಡಳಿತ ವ್ಯಾಪ್ತಿಗೆ ಒಳಪಡುವುದರಿಂದ ಲೋಕಾಯುಕ್ತ ಸಂಸ್ಥೆಯಿಂದ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಳ್ಳಲಾಗಿದೆ.
ಪುತ್ತೂರು ತಾಲೂಕು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಮಂಗಳೂರು ತಾಲೂಕು ತಹಶೀಲ್ದಾರ್ ರಮೇಶ್ ಬಾಬು, ಉಳ್ಳಾಲ ತಾಲೂಕು ತಹಶೀಲ್ದಾರ್ ಪ್ರಶಾಂತ ವಿ. ಪಾಟೀಲ, ಬಂಟ್ವಾಳ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್, ಪುತ್ತೂರು ತಾಲೂಕು ತಹಶೀಲ್ದಾರ್ ಎಸ್.ಬಿ. ಕೂಡಲಗಿ, ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಮ್, ಸುಳ್ಯ ತಾಲೂಕು ತಹಶೀಲ್ದಾರ್ ಮಂಜುಳ ಎಂ., ಮೂಡಬಿದ್ರೆ ತಾಲೂಕು ತಹಶೀಲ್ದಾರ್ ಶ್ರೀಧರ್ ಮುಂಡಾಳಮಣಿ, ಕಡಬ ತಾಲೂಕು ತಹಶೀಲ್ದಾರ್ ಪ್ರಭಾಕರ್ ಖಜೂರೆ, ಮೂಲ್ಕಿ ತಾಲೂಕು ತಹಶೀಲ್ದಾರ್ ಶ್ರೀಧರ್ ಮುಂಡಾಳಮಣಿ, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.