ಅಂಬಿಕಾದ ವಿದ್ಯಾರ್ಥಿಗಳು ಈಜು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜುಗಳ ಸಹಯೋಗದಲ್ಲಿ ಸೈಂಟ್ ಅಲೋಶಿಯಸ್ ಈಜುಕೊಳದಲ್ಲಿ ಆಯೋಜಿಸಲಾದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಹಲವು ಪದಕಗಳನ್ನು ಗೆದ್ದುಕೊಂಡಿದ್ದಾರೆ.


ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ, ಪುತ್ತೂರಿನ ಡಾ. ದೀಪಕ್ ರೈ ಹಾಗೂ ವಜ್ರಾಕ್ಷಿ ಡಿ. ರೈ ದಂಪತಿ ಪುತ್ರ ವರ್ಧಿನ್ ಡಿ. ರೈ ಅವರು 50 ಮೀಟರ್ ಬ್ರೆಸ್ಟ್ ಸ್ಟ್ರೋಕ್, 100 ಮೀಟರ್ ಬ್ರೆಸ್ಟ್ ಸ್ಟ್ರೋಕ್, ಹಾಗೂ ನಾಲ್ಕುನೂರು ಮೀಟರ್ ಇಂಡಿವಿಜುವಲ್ ಮಿಡ್ಲೇಯಲ್ಲಿ ಪ್ರಥಮ ಸ್ಥಾನ ಪಡೆದು ಮೂರು ಚಿನ್ನದ ಪದಕಗಳನ್ನು ಗೆದ್ದುಕೊಂಡಿದ್ದಾರೆ.

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ, ಪುತ್ತೂರಿನ ನರಸಿಂಹ ಶೆಣೈ ಮತ್ತು ಶ್ರೀಲಕ್ಷ್ಮೀ ಶೆಣೈ ದಂಪತಿಯ ಪುತ್ರಿ ಪ್ರತೀಕ್ಷಾ ಎನ್. ಶೆಣೈ ಅವರು 50 ಮೀಟರ್ ಬ್ರೆಸ್ಟ್ ಸ್ಟ್ರೋಕ್, 100 ಮೀಟರ್ ಬ್ರೆಸ್ಟ್ ಸ್ಟ್ರೋಕ್ ಹಾಗೂ 200 ಮೀಟರ್ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ದ್ವಿತೀಯ ಸ್ಥಾನದೊಂದಿಗೆ ಮೂರು ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಈ ಇಬ್ಬರೂ ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.

LEAVE A REPLY

Please enter your comment!
Please enter your name here