ಪುತ್ತೂರು: ಅಸೌಖ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಮೃತಪಟ್ಟಿದ್ದು, ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಪುತ್ತೂರು ನಗರ ಠಾಣೆಗೆ ಅಥವಾ ಪೊಲೀಸ್ ನಿಯಂತ್ರಣ ಕೋಣೆಗೆ ಸಂಪರ್ಕಿಸುವಂತೆ ಇಲಾಖಾ ಪ್ರಕಟಣೆ ತಿಳಿಸಿದೆ.

ಅಸೌಖ್ಯಗೊಂಡು ಬಿದ್ದಿದ್ದ ಆನಂದ ಎಂಬ ಅಪರಿಚಿತ ವ್ಯಕ್ತಿಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಅಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದು, ಸ.18ರಂದು ಮೃತಪಟ್ಟಿದ್ದು, ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಪುತ್ತೂರು ನಗರ ಠಾಣೆಗೆ ಅಥವಾ ಪೊಲೀಸ್ ನಿಯಂತ್ರಣ ಕೋಣೆಗೆ ಸಂಪರ್ಕಿಸುವಂತೆ ತಿಳಿಸಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಯುಡಿಆರ್ ನಂ:29/2025 ಕಲಂ:194 BNSSರಂತೆ ಪ್ರಕರಣ ದಾಖಲಾಗಿದೆ.