ಸೆ.21ರಿಂದ ಅ.2ರ ತನಕ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0

ಆಲಂಕಾರು: ಸೀಮಾ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ.21ರಿಂದ ಅ.2ರ ವಿಜಯದಶಮಿ ತನಕ ನವರಾತ್ರಿ ಉತ್ಸವ ನಡೆಯಲಿದೆ. ಸೆ. 21ರಂದು ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದು ಸಂಜೆ ಶ್ರೀ ಆದಿಶಕ್ತಿ ಭಜನಾ ಮಂಡಳಿ, ಶ್ರೀ ಕ್ಷೇತ್ರ ಶರವೂರು ಇವರಿಂದ ಭಜನೆ, ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ, ಪ್ರಸಾದ ವಿತರಣೆ ಸಂತರ್ಪಣೆ ನಡೆಯಲಿದೆ.

ಸೆ.22ರಂದು ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಯಕ್ಷಮಿತ್ರರು ಶರವೂರು,ಆಲಂಕಾರು ಇವರಿಂದ ಇಂದ್ರಜಿತು ಕಾಳಗ ಯಕ್ಷಗಾನ ನಡೆದು ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಸೆ.23ರಂದು ಮಂಗಳವಾರ, ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಭದ್ರಕಾಳಿ ಗುಡಿಯಲ್ಲಿ ರಂಗಪೂಜೆ,ಯಕ್ಷಶ್ರೀ ಹವ್ಯಾಸಿ ಬಳಗ ಇವರಿಂದ ಮಹಿಳಾ ಯಕ್ಷಗಾನ ತಾಳಮದ್ದಳೆ, ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.

ಸೆ.24ರಂದು ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ವಿದುಷಿ ಪ್ರಮೀಳಾ ‌ಲೋಕೇಶ್ ರವರ ನಿರ್ದೇಶನದ ಭಾರತೀಯ ಕಲೆಗಳ ತರಭೇತಿ ಕೇಂದ್ರ ಕಡಬ ಇವರಿಂದ ನೃತ್ಯನಿನಾದ, ರಾತ್ರಿ ರಂಗಪೂಜೆ, ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಸೆ. 25ರಂದು ಗುರುವಾರ ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಂಜೆ ಯಕ್ಷಗಾನ ತಾಳಮದ್ದಳೆ ವೀರಮಣಿ ಕಾಳಗ
ರಾತ್ರಿ ರಂಗಪೂಜೆ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಸೆ.26 ರಂದು ಶುಕ್ರವಾರ ಲಲಿತಾ ಪಂಚಮಿ ಬೆಳಿಗ್ಗೆ ಸಾಮೂಹಿಕ ಚಂಡಿಕಾಯಾಗ ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಂಜೆ ಹರಿಕಥೆ ಪ್ರಸಂಗ, ಶ್ರೀ ದೇವಿ ಮಹಾತ್ಮೆ, ರಾತ್ರಿ ರಂಗಪೂಜೆ ಮಹಾಪೂಜೆ, ಗಣಪತಿ ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಸೆ.27ರಂದು ಶನಿವಾರ ಮದ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ.ಸಂಜೆ ಶ್ರೀ ಕ್ಷೇತ್ರ ಶರವೂರು ಸಂಸ್ಕಾರ ಶಿಬಿರದ ವಿದ್ಯಾರ್ಥಿಗಳಿಂದ ಭಜನೆ,ಶ್ರೀ ಮಹಾಮ್ಮಾಯಿ ಭಜನಾ ತಂಡ ಗಡಿರ್ಯನಡ್ಕ ಕುಂತೂರು ಇವರಿಂದ ಭಜನೆ ರಾತ್ರಿ ರಂಗಪೂಜೆ ಮಹಾಪೂಜೆ, ಗಣಪತಿ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.

ಸೆ. 28ರಂದು ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ನಾಟ್ಯರಾಧನಾ ನೃತ್ಯಾಲಯ ಇವರಿಂದ ನಿರ್ದೇಶನ ವಿದ್ವಾನ್ ಶ್ರೀ ರಾಘವೇಂದ್ರ ಪ್ರಸಾದ್ ಎ ಇವರಿಂದ ನೃತ್ಯ ನಿನಾದ, ರಾತ್ರಿ ರಂಗಪೂಜೆ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಸೆ.29ರಂದು ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಪಟ್ಲ ಸತೀಶ್ ಶೆಟ್ಟಿ, ರವಿಚಂದ್ರ ಕನ್ನಡಿಕಟ್ಟೆ, ಅಮೃತ ಅಡಿಗ ಭಾಗವತಿಕೆಯಲ್ಲಿ ಯಕ್ಷಗಾನ ವೈಭವ, ಧಾರ್ಮಿಕ ಸಭಾ ಕಾರ್ಯಕ್ರಮ, ಶ್ರೀ ಕ್ಷೇತ್ರ ಶರವೂರಿನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ರಾವ್ ನಗ್ರಿ ಸಭಾಧ್ಯಕ್ಷತೆ ವಹಿಸಲಿದ್ದು, ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳು ಅಶ್ರೀರ್ವಾಚನ ನೀಡಲಿದ್ದು, ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಯವರು, ಒ.ಶ್ಯಾಂ ಭಟ್ ನ್ಯಾಯವಾದಿಗಳು ಮೈಸೂರು ಮತ್ತು ಅಧ್ಯಕ್ಷರು ಶ್ರೀ ಜಲದುರ್ಗಾ ದೇವಿ ದೇವಸ್ಥಾನ ಆನೆಕಲ್ಲು,ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷರು ಪಟ್ಲ ಸತೀಶ್ ಶೆಟ್ಟಿ, ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿ ಮುಖ್ಯ ಅತಿಥಿಗಳಾಗಿ, ಶ್ರೀ ಕ್ಷೇತ್ರ ಶರವೂರು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಹೇಮಂತ್ ರೈ ಮನವಳಿಕೆಗುತ್ತು, ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಗೋಪಾಲಕೃಷ್ಣ ಪಡ್ಡಿಲ್ಲಾಯ ರವರ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾಕಾರ್ಯಕ್ರಮ ನಡೆಯಲಿದೆ.


ರಾತ್ರಿ ರಂಗಪೂಜೆ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಸೆ.30ರಂದು ಬೆಳಿಗ್ಗೆ ಚಂಡಿಕಾಹೋಮ
ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಂಜೆ ಕಾಂಚನ ಈಶ್ವರ ಭಟ್ಟರ ಶಿಷ್ಯೆಯರಿಂದ ಶಾಸ್ತ್ರೀಯ ಸಂಗೀತ ಕಛೇರಿ
ರಾತ್ರಿ ರಂಗಪೂಜೆ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಮಹಾಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಲಿದೆ.

ಅ.1ರಂದು ಮಹಾನವಮಿ
ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಶ್ರೀ ಮಾತೃಶ್ರೀ ಭಜನಾ ಮಂಡಳಿ ಕೊಂಡಾಡಿಕೊಪ್ಪ ಇವರಿಂದ ಭಜನೆ ರಾತ್ರಿ ರಂಗಪೂಜೆ, ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಮಹಾಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಲಿದೆ.


ಅ.2ರಂದು ವಿಜಯದಶಮಿಯಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಅಕ್ಷರಾಭ್ಯಾಸ,ಶ್ರೀ ದುರ್ಗಾಂಬಾ ಕಲಾಸಂಗಮ ಶ್ರೀ ಕ್ಷೇತ್ರ ಶರವೂರು ಇವರಿಂದ ಯಕ್ಷಗಾನ ತಾಳಮದ್ದಳೆ, ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ನವಾನ್ನ ಸಂತರ್ಪಣೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ರಾವ್ ನಗ್ರಿ, ಪ್ರವಿತ್ರಪಾಣಿ ಹರೀಶ ಆಚಾರ್ಯ ನಗ್ರಿಗುತ್ತು, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಹೇಮಂತ್ ರೈ ಮನವಳಿಕೆಗುತ್ತು, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಹರಿಪ್ರಸಾದ ಉಪಾಧ್ಯಾಯ, ರಾಧಾಕೃಷ್ಣ ರೈ ಪರಾರಿಗುತ್ತು, ಸೇಸಪ್ಪ ಪೂಜಾರಿ ನೆಕ್ಕಿಲಾಡಿ, ವಿಠಲ ರೈ, ವಾಸಪ್ಪ ಗೌಡ, ಮೋಹನ ಶರವೂರು, ಪುಷ್ಪಲತಾ ಕೆ, ರೋಹಿಣಿ ಬಿ.ಎನ್ ಗೌರವ ಸದಸ್ಯರಾದ ದಾಮೋದರ ಗೌಡ ಶರವೂರು, ಶ್ರೀ ದುರ್ಗಾಂಬಾ ಕಲಾ ಸಂಗಮದ ಅಧ್ಯಕ್ಷರಾದ ಚಂದ್ರದೇವಾಡಿಗ, ಶ್ರೀ ಆದಿಶಕ್ತಿ ಭಜನಾ ಮಂಡಳಿ ಅಧ್ಯಕ್ಷರಾದ ನೋಣಯ್ಯ ಕೆದಿಲ, ಆಲಂಕಾರ ಸಮಿತಿಯ ಅಧ್ಯಕ್ಷರಾದ ಗಣರಾಜ್ ಆಲಂಕಾರು, ಸ್ವಯಂ ಸೇವಾ ಸಮಿತಿಯ ಅಧ್ಯಕ್ಷರಾದ ಚೆನ್ನಪ್ಪ ಗೌಡ ಶರವೂರು, ಉತ್ಸವ ಸಮಿತಿ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ಪ್ರಭು, ಬೆಂಗಳೂರು ಸಮಿತಿಯ ಅಧ್ಯಕ್ಷರಾದ ಅಜಿತ್ ಕುಮಾರ್ ಕುಂತೂರುಗುತ್ತು, ದೇವಸ್ಥಾನದ ಆರ್ಚಕರು, ಸಿಬ್ಬಂದಿ ವರ್ಗ, ಸೀಮೆಯ ಹತ್ತು ಸಮಸ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here