ಪುತ್ತೂರು: ಪಡಿ ಸಂಸ್ಥೆ ಮಂಗಳೂರು, ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಗ್ರಾಮ ಪಂಚಾಯತ್ ಹಿರೇಬಂಡಾಡಿ ಇದರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಶಿಕ್ಷಣ ಅವಲೋಕನ ಕಾರ್ಯಕ್ರಮ ಹಿರೇಬಂಡಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರೇಬಂಡಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸದಾನಂದ ಶೆಟ್ಟಿಯವರು ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶಾಂಭವಿ, ಪಿ.ಡಿ.ಓ ಸತೀಶ ಬಂಗೇರ, ಕಾರ್ಯಕ್ರಮ ಸಂಪನ್ಮೂಲ ವ್ಯಕ್ತಿಗಳಾದ ಜಿಯೋ ಡಿಸಿಲ್ವ ,ಪಡಿ ಸಂಸ್ಥೆಯ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇದರ ಅಧ್ಯಕ್ಷರಾದ ರಫೀಕ್ ದರ್ಬೆ, ಸಂಸ್ಥೆಯ ದಾಖಲಾತಿ ಸಂಯೋಜಕರಾದ ಡಾ ಸ್ಮಿತಾ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಯನ್ನು ಪಡಿ ಸಂಸ್ಥೆಯ ದಾಖಲಾತಿ ಸಂಯೋಜಕರಾದ ಡಾ. ಸ್ಮಿತಾ ನೀಡಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರಿನ ಕಾರ್ಯದರ್ಶಿ ಸುಮಂಗಲ, ಸದಸ್ಯರುಗಳಾದ ಪ್ರಮಿತ, ಪಡಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ವತ್ಸಲ, ಗ್ರಾಮ ಪಂಚಾಯತ್ ಸದಸ್ಯರು, ಶಾಲಾ ಮುಖ್ಯ ಗುರುಗಳು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸತೀಶ್ ಬಂಗೇರ ಸ್ವಾಗತಿಸಿ, ಪಡಿ ಸಂಸ್ಥೆಯ ವತ್ಸಲ ವಂದಿಸಿದರು. ಪಡಿ ಸಂಸ್ಥೆಯ ಜಿಲ್ಲಾ ಸಂಯೋಜಕಿ ಜಯ ಕಾರ್ಯಕ್ರಮ ನಿರೂಪಿಸಿದರು.