ಪಡುಮಲೆ ಮದಕ ಶ್ರೀ ರಾಜರಾಜೇಶ್ವರೀ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ 

0

ಬಡಗನ್ನೂರು: ಪಡುಮಲೆ ಮದಕ ಶ್ರೀ ರಾಜರಾಜೇಶ್ವರೀ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ವಾಸುದೇವ ತಂತ್ರಿ ಮತ್ತು ವೇದಮೂರ್ತಿ ಕುಂಟಾರು ರವೀಶ ತಂತ್ರಿ ಇವರ ಮಾರ್ಗದರ್ಶನದಲ್ಲಿ ಸೆ.22ರಂದು ಸೋಮವಾರ ಪ್ರಾರಂಭಗೊಂಡು 30 ಮಂಗಳವಾರದ ಪರ್ಯಂತ ಸಮಯ ಸಂಜೆ ಗಂ.4 ರಿಂದ 7.30ರವರೆಗೆ ಶ್ರೀ ದೇವಿಯ ಸನ್ನಿಧಿಯಲ್ಲಿ ನಡೆಯಲಿರುವುದು.

ಭಕ್ತಾದಿಗಳು ಆಗಮಿಸಿ ಶ್ರೀ ದೇವಿಯ ಸನ್ನಿಧಿಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ  ಪ್ರಸನ್ನ ಕಾಲದಲ್ಲಿ ಶ್ರೀ ರಾಜರಾಜೇಶ್ವರೀ ಮಾತೆಯ ಶ್ರೀಮುಡಿ ಗಂಧ-ಪ್ರಸಾದವನ್ನು ಸ್ವೀಕರಿಸಿ, ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗುವಂತೆ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ ಗಿರಿಮನೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾರ್ಯಕ್ರಮಗಳು
ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಧಾರ್ಮಿಕ ಕಾರ್ಯಕ್ರಮ ಅಂಗವಾಗಿ ವಿವಿಧ ಭಜನಾ ತಂಡಗಳಿಂದ ಭಜನೆ ಹಾಗೂ ವಿವಿಧ ವೈದಿಕ ತಂಡಗಳಿಂದ ಸಹಸ್ರನಾಮಾದಿ ಪಾರಾಯಣಗಳು ಹಾಗೂ ಶ್ರೀ ದೇವಿಗೆ ಹೂವಿನ ಪೂಜೆ, ಮಹಾಪೂಜಾ ಕಾರ್ಯಕ್ರಮ 9ದಿನ ಪರ್ಯಂತ ವಿಜೃಂಭಣೆಯಿಂದ ನಡೆಯಲಿರುವುದು.

ಸೆ.22ಸೋಮವಾರ ಸಂಜೆ ಗಂ 3.30ಕ್ಕೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಾಲಯದಿಂದ ಮದಕ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಭಜನೆ ಹಾಗೂ ವಾದ್ಯಘೋಷಗಳೊಂದಿಗೆ ವೈಭವದ ಮೆರವಣಿಗೆ ನಡೆಯಲಿದೆ.

LEAVE A REPLY

Please enter your comment!
Please enter your name here