ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ದೃಶಾನ ಎಸ್. ಸರಳಿಕಾನ ಅವರು ವಿದ್ಯಾಭಾರತಿ ವತಿಯಿಂದ ಖಾನಾಪುರದ ಶಾಂತಿನಿಕೇತನ ಪಬ್ಲಿಕ್ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ 17 ವರ್ಷದೊಳಗಿನ ಬಾಲಕಿಯರ 52 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ.
ಕರಾಟೆ ಅಧ್ಯಾಪಕ ಶಿವಪ್ರಸಾದ್ ಇವರ ಶಿಷ್ಯೆಯಾಗಿರುವ ಈಕೆ ಬೆಟ್ಟಂಪಾಡಿಯ ಸುರೇಶ್ ಗೌಡ ಹಾಗೂ ವಿದ್ಯಾಶ್ರೀ ದಂಪತಿಗಳ ಪುತ್ರಿ.