ಕಾರ್ಗಿಲ್ ಯೋಧ ಕ್ಯಾ. ನವೀನ್ ನಾಗಪ್ಪ ರವರಿಂದ ದಿಕ್ಸೂಚಿ ಭಾಷಣ
ಬೆಟ್ಟಂಪಾಡಿ: ವಿಶ್ವಹಿಂದು ಪರಿಷದ್, ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ – ಪೂಜಾ ಸಮಿತಿ ವತಿಯಿಂದ 13 ನೇ ವರ್ಷದ ಸಾಮೂಹಿಕ ದುರ್ಗಾಪೂಜೆಯು ಶರನ್ನವರಾತ್ರಿಯ ಶುಭದಿನ ಸೆ. 23 ರಂದು ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಲಿದೆ.
ಸಂಜೆ ಗಂ. 4 ರಿಂದ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆದು, ಸಂಜೆ 5 ರಿಂದ ದುರ್ಗಾಪೂಜೆ ಆರಂಭಗೊಳ್ಳಲಿದೆ. ಸಂಜೆ 7.30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ದುರ್ಗಾಪೂಜಾ ಸಮಿತಿಯ ಅಧ್ಯಕ್ಷ, ಶ್ರೀ ಕ್ಷೇತ್ರದ ಮೊಕ್ತೇಸರ ವಿನೋದ್ ಕುಮಾರ್ ರೈ ಗುತ್ತು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಗಿಲ್ ಯೋಧ ಕ್ಯಾ. ನವೀನ್ ನಾಗಪ್ಪ ರವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಪ್ರಗತಿಪರ ಕೃಷಿಕರಾದ ಗಣೇಶ್ ರೈ ಆನಡ್ಕ, ಶಂಕರ ಪಾಟಾಳಿ ಕಕ್ಕೂರು, ಮಂಗಳೂರಿನ ಶ್ರೀನಿಧಿ ಕನ್ಸ್ಟ್ರಕ್ಷನ್ ಮತ್ತು ಜೆರಾಕ್ಸ್ ಸೆಂಟರ್ ಮ್ಹಾಲಕ ವಾಸಪ್ಪ ಪೂಜಾರಿ ಮಿತ್ತಡ್ಕ, ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಉಪನ್ಯಾಸಕ ಡಾI ಪ್ರಮೋದ್ ಎನ್.ಜಿ., ಪಾಣಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ಪ್ರವೀಣಾ ಸದಾಶಿವ ರೈ ಸೂರಂಬೈಲು, ಇರ್ದೆ ಬೆಟ್ಟಂಪಾಡಿ ಪ್ರಾ.ಕೃ.ಪ.ಸಹಕಾರ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಬಿ. ಲಿಂಗಪ್ಪ ಗೌಡ ಭಾಗವಹಿಸಲಿದ್ದಾರೆ. ಇದೇ ವೇಳೆ ಮಾಜಿ ಯೋಧ ಸುಬೇದಾರ್ ಮೇಜರ್ ಗಣೇಶ್ ಎಂ. ರವರಿಗೆ ಸನ್ಮಾನ ನಡೆಯಲಿದೆ. ಬಳಿಕ ಅನ್ನಸಂತರ್ಪಣೆ ಜರಗಲಿದೆ ಎಂದು ಸಾಮೂಹಿಕ ದುರ್ಗಾಪೂಜಾ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.