ಪುತ್ತೂರು: ಕುಂಬ್ರ ವರ್ತಕರ ಸಂಘದ ಸದಸ್ಯ, ಪರ್ಪುಂಜದಲ್ಲಿ ಕ್ಯಾಂಟೀನ್ ನಡೆಸುತ್ತಿರುವ ಇಬ್ರಾಹಿಂರವರು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದು, ಇವರಿಗೆ ವರ್ತಕರ ಸಂಘದ ವತಿಯಿಂದ ಚಿಕಿತ್ಸಾ ವೆಚ್ಚವಾಗಿ ಆರ್ಥಿಕ ಸಹಕಾರ ನೀಡಲಾಯಿತು.
ವರ್ತಕರ ಸಂಘದ ವಾಟ್ಸಪ್ ಗ್ರೂಪ್‌ನಲ್ಲಿ ಇಬ್ರಾಹಿಂ ರವರಿಗೆ ಆರ್ಥಿಕ ನೆರವು ಕೋರಿ ಮನವಿ ಮಾಡಿಕೊಳ್ಳಲಾಗಿತ್ತು. ಮನವಿಗೆ ಸ್ಪಂದಿಸಿದ ವರ್ತಕರು ತಮ್ಮ ಕೈಯಲ್ಲಾದ ಆರ್ಥಿಕ ನೆರವು ನೀಡಿದ್ದರು. ಒಟ್ಟು 35 ಸಾವಿರ ರೂಪಾಯಿಗಳು ಸಂಗ್ರಹವಾಗಿದ್ದು, ಈ ಮೊತ್ತವನ್ನು ಸೆ.20 ರಂದು ಇಬ್ರಾಹಿಂರವರ ಪುತ್ರ ಬಾತೀಷ ರವರಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಪಿ.ಕೆ ಮಹಮ್ಮದ್ ಕೂಡುರಸ್ತೆ, ಪ್ರ.ಕಾರ್ಯದರ್ಶಿ ಭವ್ಯ ರೈ, ಸ್ಥಾಪಕ ಅಧ್ಯಕ್ಷ ಶ್ಯಾಮ್‌ಸುಂದರ ರೈ ಕೊಪ್ಪಳ, ಮಾಜಿ ಅಧ್ಯಕ್ಷರುಗಳಾದ ನಾರಾಯಣ ಪೂಜಾರಿ ಕುರಿಕ್ಕಾರ, ಮೆಲ್ವಿನ್ ಮೊಂತೆರೋ,ಸದಸ್ಯ ಸಂಶುದ್ದೀನ್ ಎ.ಆರ್ ಉಪಸ್ಥಿತರಿದ್ದರು.