ತುಂಬೆ ಮತ್ತು ಉಪ್ಪಿನಂಗಡಿಯಲ್ಲಿ ಜಾನುವಾರು ಕಳವು ಪ್ರಕರಣ – ಆರೋಪಿಗಳ ವಿರುದ್ದ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

0

ಪುತ್ತೂರು: ಕಳೆದ ಅ.14ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಮತ್ತು ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳವು ಹಾಗೂ ಅದರ ಅಂಗಾಗಗಳು ಮರುದಿನ ಸಮೀಪದಲ್ಲಿ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ದ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (THE KARNATAKA CONTROL OF ORGANISED CRIME ACT- 2000) ರ (KCOCA Act ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಆರೋಪಿಗಳಾದ ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗಿತ್ತು. ಸದ್ರಿ ಆರೋಪಿಗಳು ಸೆ.4ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರ:76/2025, Sec:THE BHARATIYA NYAYA SANHITA (BNS), 2023 (U/s-331(4),305); THE KARNATAKA PREVENTION OF SLAUGHTER AND PRESERVATION OF CATTLE ACT-2020 (U/s-4,5) ಪ್ರಕರಣದಲ್ಲೂ ಆರೋಪಿಗಳಾಗಿರುತ್ತಾರೆ.

ಆರೋಪಿಗಳನ್ನು ಸೆ.5ರಂದು ದಸ್ತಗಿರಿ ಮಾಡಿ ನ್ಯಾಯಾಲಯ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

LEAVE A REPLY

Please enter your comment!
Please enter your name here