ಪುತ್ತೂರು: ಕೊಳ್ತಿಗೆ ಹಾಲು ಉತ್ಪಾದಕರ ಸಹಕಾರ ಸಂಘದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.22ರಂದು ಬೆಳಿಗ್ಗೆ 9.30 ಗಂಟೆಗೆ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಸಹಕಾರ ಸಂಘದ ಅಧ್ಯಕ್ಷ ಡಿ.ವಿಶ್ವನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ವಾರ್ಷಿಕ ಸಾಮಾನ್ಯ ಸಭೆಗೆ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಘದ ಅಭಿವೃದ್ಧಿಗೆ ವಿವಿಧ ಸಲಹೆ ಸೂಚನೆಗಳನ್ನು ನೀಡುವಂತೆ ಸಂಘದ ಉಪಾಧ್ಯಕ್ಷ ಕೆ.ಬೆಳ್ಯಪ್ಪ ಗೌಡ, ಕಾರ್ಯದರ್ಶಿ ಹರ್ಷಿತ್ ಕೆ.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.