ನಿಡ್ಪಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಪುತ್ತೂರು ಬೆಟ್ಟಂಪಾಡಿ ವಲಯದ ರೆಂಜ ಒಕ್ಕೂಟದ ತ್ರೈಮಾಸಿಕ ಸಭೆ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ನಾಯ್ಕ ದೆಯ್ಯಾರಡ್ಕ ಇವರ ಅಧ್ಯಕ್ಷತೆಯಲ್ಲಿ ಸೆ.21 ರಂದು ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.
ಬೆಟ್ಟಂಪಾಡಿ ವಲಯ ಮೆಲ್ವೀಚಾರಕ ಸೋಹನ್ ಜಿ ಯೋಜನೆಯ ಕೆಲವು ನಿಯಮ ಮತ್ತು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಥಮಿಕ ಆರೋಗ್ಯ ಇಲಾಖೆಯ ಬೆಟ್ಟಂಪಾಡಿ ಸಮುದಾಯ ಆರೋಗ್ಯ ಅಧಿಕಾರಿ ರಾಜಶ್ರೀ ಆರೋಗ್ಯ ಮಾಹಿತಿ ನೀಡಿದರು. ಬೆಟ್ಟಂಪಾಡಿ ಗ್ರಾಮದ ಕೃಷಿ ಸಖಿ ಸೌಮ್ಯ ಕೃಷಿ ಇಲಾಖೆಯಿಂದ ರೈತರಿಗೆ ಸಿಗುವ ಹಲವು ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ವಾರ್ಷಿಕೋತ್ಸವ ಆಚರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಒಕ್ಕೂಟದ ಪದಾಧಿಕಾರಿ ಪ್ರೇಮಲತಾ ಕೂವೆಂಜ ಸ್ವಾಗತಿಸಿದರು. ನಳಿನಾಕ್ಷಿ ಪಾರ ವಂದಿಸಿದರು. ಸೇವಾ ಪ್ರತಿನಿಧಿ ಜಗನ್ನಾಥ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟದ ಪದಾಧಿಕಾರಿಗಳು ಸಹಕರಿಸಿದರು. ಒಕ್ಕೂಟದ ಸದಸ್ಯರು ಪಾಲ್ಗೊಂಡರು.