ಸವಣೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಆರ್ಥಿಕ ಅರಿವು-ಜಾಗೃತಿ ಕಾರ್ಯಕ್ರಮ

0

ಸವಣೂರು: ಬ್ಯಾಂಕ್‌ಗಳು ಗ್ರಾಹಕರಿಗೆ ಸಾಲ ನೀಡಲು ಮಾತ್ರ ಸೀಮಿತವಾಗಿಲ್ಲ. ಪ್ರಸಕ್ತ ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನ ವ್ಯವಸ್ಥೆಯಡಿ ಬ್ಯಾಂಕ್‌ಗಳು ಗ್ರಾಹಕರಿಗೆ ಹಲವು ಯೋಜನೆ ತಲುಪಿಸುವ ಕೆಲಸ ಮಾಡುತ್ತಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಹಣಕಾಸು ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್‌ಗಳ ಮೂಲಕ ಲಭ್ಯವಿದೆ. ಗ್ರಾಹಕರು ಬ್ಯಾಂಕ್‌ನೊಂದಿಗೆ ನಿರಂತರ ವ್ಯವಹಾರ ಇಟ್ಟುಕೊಳ್ಳುವುದರಿಂದ ಗೊಂದಲ/ಸಮಸ್ಯೆ ನಿವಾರಿಸಲು ಸಾಧ್ಯ, ಜತೆಗೆ ವಿಮೆಗಳನ್ನೂ ಮಾಡಲು ಸಾಧ್ಯವಿದೆ ಎಂದು ಆರ್ಥಿಕ ಸುರಕ್ಷತಾ ಮಾಹಿತಿದಾರ ಡಿ.ಎರ್.ನಟರಾಜನ್ ಹೇಳಿದರು.

ಅವರು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮತ್ತು ನಬಾರ್ಡ್ ಆಶ್ರಯದಲ್ಲಿ ಸವಣೂರು ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಡೆದ ‘ಗ್ರಾಹಕರಿಗೆ ಆರ್ಥಿಕ ಅರಿವು-ಜಾಗೃತಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾನೂನು ಸಲಹೆಗಾರ ಮಹಾಬಲ ಶೆಟ್ಟಿ ಕೊಮ್ಮಂಡ ಮಾತನಾಡಿ, ಸವಣೂರಿನಲ್ಲಿ ಡಿಸಿಸಿ ಬ್ಯಾಂಕ್ ಶಾಖೆಯನ್ನು ಸವಣೂರು ಸೀತಾರಾಮ ರೈ ಅವರ ನೇತೃತ್ವದಲ್ಲಿ ಆರಂಭಿಸುವ ಮೂಲಕ ಹಲವರ ಅಭಿವೃದ್ಧಿಗೆ ಕಾರಣವಾಗಿದೆ.ಹಲವರ ಜಾಗದ ಪಹಣಿಪತ್ರವು ಹಿರಿಯರ ಹೆಸರಿನಲ್ಲೇ ಇದೆ.ಇದರಿಂದ ಯಾವುದೇ ಸವಲತ್ತುಗಳನ್ನು ಪಡೆಯಲು ಅವರಿಗೆ ಸಾಧ್ಯವಾಗುತ್ತಿಲ್ಲ. 

ಸವಣೂರು ಪ್ರಾ.ಕೃ.ಪ.ಸ.ಸಂಘವೂ ಉತ್ತಮ ಕೆಲಸ ಮಾಡುತ್ತಿದೆ. ಚಾರ್ವಾಕ  ಪ್ರಾ.ಕ.ಪ.ಸ.ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡ ಮಾತನಾಡಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಈಗ ಎಲ್ಲಾ ರಂಗದಲ್ಲೂ ಮುಂಚೂಣಿಯಲ್ಲಿದ್ದು,ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ.ಸಿಬಂದಿಗಳೂ ಜನರೊಂದಿಗೆ ಉತ್ತಮವಾಗಿ ವ್ಯವಹರಿಸುತ್ತಾರೆ ಎಂದರು. ಸವಣೂರು ಪ್ರಾ.ಕೃ.ಸ.ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪಿ.ಮಾತನಾಡಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸೇವೆಗಳು ಹಾಗೂ ಸಿಬಂದಿಗಳ ಸ್ಪಂದನಾಶೀಲ ಕಾರ್ಯವೈಖರಿ ಶ್ಲಾಘನೀಯ ಎಂದರು.

ಸವಣೂರು ಪ್ರಾ.ಕೃ.ಸ.ಸಂಘದ ನಿರ್ದೇಶಕರಾದ ಚೆನ್ನಪ್ಪ ಗೌಡ ನೂಜಿ ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಗ್ರಾಮಿಣ ಭಾಗದ ಜನತೆಗೆ ಪರಭಾಷಿಕ ಸಿಬ್ಬಂದಿಗಳೊಂದಿಗೆ ಸಂವಹನ ಮಾಡಿ ವ್ಯವಹರಿಸುವುದು ಕಷ್ಟಕರವಾಗಿರುವ ಸಮಯದಲ್ಲಿ ಸವಣೂರಿನಲ್ಲಿರುವ ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘ,ಸವಣೂರು ಪ್ರಾ.ಕೃ.ಪ.ಸ.ಸಂಘ,ಡಿಸಿಸಿ ಬ್ಯಾಂಕ್‌ನ ಸವಣೂರು ಶಾಖೆಯೂ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿರುವ ಕಾರಣದಿಂದ ಈ ಭಾಗದ ಜನರ ಆರ್ಥಿಕಾಭಿವೃದ್ಧಿಗೆ ಕಾರಣವಾಗಿದೆ ಎಂದರು.

ಈ ಸಂದರ್ಭದಲ್ಲಿ ಆರ್ಥಿಕ ಸುರಕ್ಷತಾ ಮಾಹಿತಿದಾರ ಡಿ.ಎರ್.ನಟರಾಜನ್ ಅವರನ್ನು ಬ್ಯಾಂಕಿನ ವತಿಯಿಂದ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್., ಉಪಾಧ್ಯಕ್ಷೆ ಜಯಶ್ರೀ, ಸದಸ್ಯೆ ರಾಜೀವಿ ಶೆಟ್ಟಿ, ಬೆಳಂದೂರು ಗ್ರಾ.ಪಂ.ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ, ನವೋದಯ ಸ್ವಸಹಾಯ ಸಂಘಗಳ ಪ್ರೇರಕರಾದ ಪ್ರೇಮಾ ಕೆಡೆಂಜಿ, ಕಲ್ಪವಲ್ಲಿ ಕೆದಿಲಾಯ, ಶ್ಯಾಮಲಾ ರೈ ಉಪಸ್ಥಿತರಿದ್ದರು.

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸವಣೂರು ಶಾಖಾ ವ್ಯವಸ್ಥಾಪಕಿ ಜಯಂತಿ ನಾಗೇಶ್ ಅವರು ಸ್ವಾಗತಿಸಿದರು. ಸಿಬ್ಬಂದಿಗಳಾದ ದಿನೇಶ್ ಎಂ.ವಂದಿಸಿದರು. ಶಿವರಂಜಿನಿ ಕಾರ್ಯಕ್ರಮ ನಿರೂಪಿಸಿದರು‌. ಪ್ರತೀಕ್ಷಾ, ಚೈತ್ರಾ, ಶೋಭಾ ಬಾಲಚಂದ್ರ, ನಿತ್ಯನಿಧಿ ಸಂಗ್ರಾಹಕ ಬಾಲಚಂದ್ರ ರೈ ಕೆರೆಕ್ಕೋಡಿ ಸಹಕರಿಸಿದರು. 

LEAVE A REPLY

Please enter your comment!
Please enter your name here