ಪುತ್ತೂರು: 2013-14ರಲ್ಲಿ ರೋಟರಿ ಕ್ಲಬ್ ಪುತ್ತೂರು ಈಸ್ಟ್ ಅಧ್ಯಕ್ಷರಾಗಿ ಕ್ಲಬ್ ಅನ್ನು ಮುನ್ನೆಡೆಸಿ ಇದೀಗ ಅಗಲಿದ ಜಯರಾಮ ರೈ ನುಳಿಯಾಲುರವರಿಗೆ ರೋಟರಿ ಕ್ಲಬ್ ಪುತ್ತೂರು ಈಸ್ಟ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ಸೆ.22ರಂದು ರೋಟರಿ ಮನೀಷಾ ಸಭಾಂಗಣದಲ್ಲಿ ಸಂಜೆ ನೆರವೇರಲಿದೆ. ಸದಸ್ಯರು ಈ ಕಾರ್ಯಕ್ರಮಕ್ಕೆ ಹಾಜರಾಗಿ ಅಗಲಿದ ಜಯರಾಮ ರೈ ನುಳಿಯಾಲುರವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಬೇಕಾಗಿ ಕ್ಲಬ್ ಅಧ್ಯಕ್ಷ ಶಶಿಧರ್ ಕಿನ್ನಿಮಜಲು, ಕಾರ್ಯದರ್ಶಿ ನವೀನ್ ರೈ ಪಂಜಳ, ಕೋಶಾಧಿಕಾರಿ ಜಯಂತ್ ಬಾಯಾರುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
